Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಜ್ಯದ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿದ ಮಹಾರಾಷ್ಟ್ರ ಪೊಲೀಸರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾರಾಷ್ಟ್ರದ ಕೊಂಕಣ್ ವಿಭಾಗದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಟಿಎನ್ಎಫ್) ಪೊಲೀಸರು ಬೆಂಗಳೂರು ನಗರದ ವಿವಿಧೆಡೆ ದಾಸ್ತಾನು ಮಾಡಲಾಗಿದ್ದ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.

ಡ್ರಗ್ಸ್ ತಯಾರಿಕಾ ಘಟಕಗಳು ಪತ್ತೆ!:
ಮಹಾರಾಷ್ಟ್ರದಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು
, ಆರೋಪಿಗಳು ಆರ್ ಜೆ ಈವೆಂಟ್ ಹೆಸರಿನಲ್ಲಿ ಮಾದಕ ಪದಾರ್ಥಗಳ ತಯಾರಿಕಾ ಘಟಕಗಳನ್ನು ನಡೆಸುತ್ತಿದ್ದುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಮುಂಬೈ ಪ್ರಕರಣವೊಂದರಲ್ಲಿ 1.5 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು.
ಆ ಸಂದರ್ಭದಲ್ಲಿ ಬಂಧಿತನಾಗಿದ್ದ ಅಬ್ದುಲ್ಲಾ ಖಾದರ್ ಶೇಕ್ ಎಂಬಾತ ವಿಚಾರಣೆ ವೇಳೆ ಹಲವು ವಿಷಯ ಬಾಯ್ಬಿಟ್ಟಿದ್ದು ಅದರನ್ವಯ ಮತ್ತೋರ್ವ ಆರೋಪಿ ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.


ಆರೋಪಿ ಪ್ರಶಾಂತ್ ಯಲ್ಲಪ್ಪ ಪಾಟೀಲ್ ತಿಳಿಸಿದ ಮಾಹಿತಿ ಮೇರೆಗೆ ಬೆಂಗಳೂರಿನ ಹೊರ ಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದರು.


ಈ ಸಂದರ್ಭದಲ್ಲಿ
4.1 ಕೆ.ಜಿ ಘನ ರೂಪದ ಎಂಡಿಎಂಎ ಮತ್ತು 17 ಕೆಜಿ ದ್ರವ ರೂಪದ ಎಂಡಿಎಂ ಸೇರಿದಂತೆ ಒಟ್ಟು 55.88 ಕೋಟಿ ರೂ ಮೌಲ್ಯದ 21.4 ಕೆ.ಜಿ‌ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಈಗಾಗಲೇ ರಾಜಸ್ಥಾನದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ‌ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.


ವಿದೇಶಿ ಯುವತಿ ಬಂಧನ:
ಹೊಸ ವರ್ಷಾಚರಣೆ ಕೇವಲ ಎರಡು ದಿನ ಬಾಕಿ ಇರುವಾಗ
ಡ್ರಗ್ಸ್​ ಪೆಡ್ಲರ್ಸ್​ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇತ್ತೀಚೆಗೆ ಅಕ್ರಮವಾಗಿ ಡ್ರಗ್ಸ್​ ಸಾಗಿಸುತ್ತಿದ್ದ ವಿದೇಶಿ ಯುವತಿ ಬಂಧಿಸಿದ್ದರು.
ಬ್ರೆಡ್​ ಪ್ಯಾಕೆಟ್​ನಲ್ಲಿ ಡ್ರಗ್ಸ್​ ಅವಿತಿಟ್ಟು ಮುಂಬೈನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ
, ಆಕೆಯಿಂದ ಸಿಸಿಬಿ ಪೊಲೀಸರು 1.20 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ ಪಡೆದಿದ್ದನ್ನು ಸ್ಮರಿಸಬಹುದಾಗಿದೆ.

ನೈಜೀರಿಯಾದ ಒಲಾಜಿಡೆ ಎಸ್ತಾರ್ ಬಂಧಿತ ವಿದೇಶಿ ಯುವತಿ. ಈಕೆಯಿಂದ 1.20 ಕೋಟಿ ಮೌಲ್ಯದ 121 ಗ್ರಾಂ ಕೊಕೇನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಆರೋಪಿಯ ವಿರುದ್ಧ ಎನ್​​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ವಿದ್ಯಾರ್ಥಿ ವೀಸಾದಡಿ 2024ರಲ್ಲಿ ದೆಹಲಿಗೆ ಬಂಧಿತ ಯುವತಿ ಬಂದಿದ್ದಳು. ಕಾಲೇಜಿಗೆ ದಾಖಲಾಗದೆ, ಡ್ರಗ್ಸ್ ದಂಧೆಕೋರರ ನಂಟು ಬೆಳೆಸಿಕೊಂಡು ಮುಂಬೈನ ಹಲವು ಕಡೆಗಳಲ್ಲಿ ವಾಸವಾಗಿದ್ದಳು.
ಮುಂಬೈನಲ್ಲಿದ್ದ ಸ್ನೇಹಿತ ನೀಡುವ ಮಾದಕ ವಸ್ತುಗಳನ್ನು ಹೇಳಿದ ಜಾಗಕ್ಕೆ ಡ್ರಗ್ಸ್ ಪೆಡ್ಲಿಂಗ್ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಳು ಎನ್ನಲಾಗಿದೆ.


ಅದೇ ರೀತಿ ಬೆಂಗಳೂರಿಗೆ ಕೊಕೇನ್ ಸಾಗಿಸುವ ಸಲುವಾಗಿ ಖಾಸಗಿ ಬಸ್ ಮೂಲಕ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದಳು. ಯಾರಿಗೂ ಅನುಮಾನ ಬರದಂತೆ ತುಂಡು ಮಾಡಿದ್ದ ಬ್ರೆಡ್​​ನಲ್ಲಿ 121 ಗ್ರಾಂ ಕೊಕೇನ್ ಅನ್ನು ಕವರ್​​ನಲ್ಲಿ ಬಚ್ಚಿಟ್ಟಿದ್ದಳು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಇನ್‌ಸ್ಪೆಕ್ಟರ್ ರಕ್ಷಿತ್ ನೇತೃತ್ವದ ತಂಡ ಯುವತಿಯನ್ನು ಬಂಧಿಸಿತ್ತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು