Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಮೇ.7ರಂದು ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಾಂಗಲ್ಯ ಭಾಗ್ಯ ಯೋಜನೆಯಡಿ ಸರಳ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ದಿನಾಂಕ ಮೇ-,07 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಕಟಕ ಲಗ್ನದಲ್ಲಿ ಸಾಮೂಹಿಕ ಸರಳ ವಿವಾಹ ನೆಡೆಯಲಿದೆ ಎಂದು ದೇವಾಲಯದ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಬಿ. ನಾರಾಯಣಸ್ವಾಮಿ ತಿಳಿಸಿದ್ದಾರೆ.

 ಈ ಕುರಿತು ಮಾಹಿತಿ ನೀಡಿದ ಅವರು ಅರ್ಹತಾ ಫಲಾನುಭಾವಿಗಳು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಕಛೇರಿಯಲ್ಲಿ ಅರ್ಜಿ ಪಡೆದು ಮಾರ್ಚಿ 31ರ ಒಳಗಾಗಿ ಸೂಕ್ತ ದಾಖಲೆಗಳೂಂದಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕು.

ನೊಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ಮಾರ್ಚಿ 10 ರಂದು ಪ್ರಕಟಿಸಲಾಗುವುದು. ವಧು-ವರರ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಮಾರ್ಚಿ 20 ರೊಳಗಾಗಿ ಸಲ್ಲಿಸಬಹುದು. ಅಂತಿಮ ವಧು-ವರರ ಪಟ್ಟಿಯನ್ನು ಏಪ್ರಿಲ್ 25ರಂದು ಪ್ರಕಟಿಸಲಾಗುವುದು. ಮಾಂಗಲ್ಯ ಭಾಗ್ಯ ಯೋಜನೆಯಲ್ಲಿ

ವರನಿಗೆ 5,000 ರೂ.ಗಳನ್ನು ಹಾಗೂ ವಧುವಿಗೆ 10,000 ರೂ.ಗಳನ್ನು ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ( 48,000 ರೂ. ಮೌಲ್ಯದ್ದು) ಹೀಗೆ ಒಟ್ಟು 63,000 ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುವುದು. ಇದಲ್ಲದೆ  ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮಕ್ಕೆ  ಆಗಮಿಸುವ ವಧು-ವರರ ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುವುದು.

ಹೆಚ್ಚಿನ ವಿವರಗಳಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಹಾಗು ದೇವಾಲಯದ ಅಭಿವೃದ್ದಿ ಪ್ರಾಧಿಕಾರದ ನಾನು ನಿರ್ದೇಶಿತ ಸದಸ್ಯರುಗಳನ್ನು ಸಂಪರ್ಕಿಸಿ ಎಂದು ದೇವಾಲಯದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಬೈಲ್ ಸಂಖ್ಯೆ-ಜಿ.ಎನ್. ರಂಗಪ್ಪ- 9449142479, ರವಿ. ಕೆ.ಎಸ್- 9611290053, ಲಕ್ಷ್ಮವಾಯಕ 81050 12135, ಮಹೇಶ್‌ಕುಮಾ‌ರ್ ಆರ್.ವಿ-9886622223, ಹೇಮಲತಾ ರಮೇಶ ಎಂ ಎಲ್ 9900403330.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು