Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ಪ್ರೇರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು
, ಆರ್ಥಿಕ ನೀತಿಗಳು ನಮ್ಮೆಲ್ಲರಿಗೂ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರಂಥವರೇ 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂದು ಬಣ್ಣಿಸಿದ್ದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು.

ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಯಿತು. ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ದಕ್ಷ ಹಾಗೂ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು.

ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆ ಗುರುತನ್ನು ಬಿಟ್ಟುಹೋಗಿದ್ದಾರೆ ಎಂದು ಅವರು ತಿಳಿಸಿದರು.

ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದುದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು.

ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು  ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು