Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಚುನಾವಣಾ ಆಯೋಗ, ಬಿಜೆಪಿ ಮತಗಳ್ಳತನ ವಿರುದ್ಧ ಬೃಹತ್ ಪ್ರತಿಭಟನೆ

 ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್‌‍ಪಕ್ಷ ಭಾನುವಾರ ದೆಹಲಿಯಲ್ಲಿ ರಾಷ್ಟ್ರಮಟ್ಟದ ಬೃಹತ್‌ಪ್ರತಿಭಟನೆ ನಡೆಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಯಿತು.


ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್‌ಸುಖು ಸಿಂಗ್‌ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷಗಳ ನಾಯಕರು ಪ್ರದೇಶ ಕಾಂಗ್ರೆಸ್‌‍ಅಧ್ಯಕ್ಷರು ಶಾಸಕರು ಸಚಿವರು ಸಂಸದರು ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಕೇಂದ್ರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ವಿವಿಧ ರಾಜ್ಯಗಳಲ್ಲಿ ಮತಗಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್‌‍ಗಂಭೀರ ಆರೋಪ ಮಾಡಿದೆ. ಇತ್ತೀಚಿಗೆ ನಡೆದ ಮಹಾರಾಷ್ಟ್ರ, ಬಿಹಾರ ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳ ಗೆಲುವಿಗೆ ಮತಗಳ್ಳತನವೇ ಕಾರಣ ಎಂಬುದು ಕಾಂಗ್ರೆಸ್ಸಿನ ಗಂಭೀರ ಆರೋಪವಾಗಿದೆ. ಕೇಂದ್ರದಲ್ಲಿ ಎನ್‌ಡಿ ಎ ಸರ್ಕಾರ ಅಧಿಕಾರಕ್ಕೆ ಬರಲು ಮತಗಳ್ಳತನವೇ ಕಾರಣ ಎಂದು ರಾಹುಲ್‌ಗಾಂಧಿ ಹೇಳಿದ್ದರು.

ಕರ್ನಾಟಕದ ಮಹದೇವಪುರ ಮತ್ತು ಅಳಂದ ವಿಧಾನಸಭಾ ಕ್ಷೇತ್ರಗಳಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್‌ಗಾಂಧಿ ಪತ್ರಿಕಾಗೋಷ್ಠಿ ನಡೆಸಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು. ಅದರ ಬೆನ್ನಲ್ಲೇ ಹಲವಾರು ಕಡೆಗಳಲ್ಲಿ ಕ್ಷೇತ್ರ ಮಟ್ಟದ ಪ್ರತಿಭಟನೆಗಳಾಗಿತ್ತು.ಕರ್ನಾಟಕದ ಕ್ಷೇತ್ರಗಳಲ್ಲಿ ಮತ್ತು ಮಹಾರಾಷ್ಟ್ರದ ಕೆಲವು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿರುವುದನ್ನು ರಾಹುಲ್‌ಗಾಂಧಿ ದಾಖಲೆ ಸಹಿತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಪ್ರತಿಭಟನೆ ಹೆಚ್ಚು ಗಮನ ಸೆಳೆದಿದೆ.

ಮತಗಳ್ಳತನವನ್ನು ತನಿಖೆಗೆ ಒಳಪಡಿಸಬೇಕು ಎಂಬುದು ಕಾಂಗ್ರೆಸ್ಸಿನ ಒತ್ತಾಯವಾಗಿತ್ತು. ಇತ್ತೀಚೆಗೆ ನ್ಯಾಷನಲ್‌ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್‌ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ಮತ್ತೊಂದು ಪ್ರಕರಣ ದಾಖಲಾಗಿದೆ ಹಾಗೂ ಕೆಲವು ಪ್ರಮುಖ ನಾಯಕರುಗಳಿಗೆ ನೋಟಿಸ್‌‍ನೀಡಲಾಗಿದೆ.

ಇದು ಕಾಂಗ್ರೆಸ್‌‍ಪಕ್ಷವನ್ನು ಕೆರಳಿಸಿದೆ. ಪ್ರತಿಕಾರ ಎಂಬಂತೆ ಮತಗಳ್ಳತನವನ್ನು ಮುಂದಿಟ್ಟುಕೊಂಡು ಒಂದು ಲಕ್ಷ ಜನರನ್ನು ಸಂಘಟಿಸಿ ದೆಹಲಿಯಲ್ಲಿ ಬೃಹತ ಪ್ರತಿಭಟನೆಯ ಮೂಲಕ ಕಾಂಗ್ರೆಸ್‌‍ತನ್ನ ಬಲ ಪ್ರದರ್ಶನ ಮಾಡುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಆರ್‌.ಬಿ.ತಿಮಾಪುರ್‌, ಹಿರಿಯ ಕಾಂಗ್ರೆಸ್‌‍ನಾಯಕ ಬಿ.ಕೆ.ಹರಿಪ್ರಸಾದ್‌, ಸೇರಿದಂತೆ ಬಹುತೇಕ ಸಚಿವರು, 50ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದಾರೆ.

ಕರ್ನಾಟಕದಲ್ಲಿ ಚಳಿಗಾಲದ ವಿಧಾನ ಮಂಡಳ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರು ಭಾನುವಾರ ರಾತ್ರಿಯೇ ಬೆಳಗಾವಿಗೆ ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ .
ಪ್ರತಿಭಟನೆಯಲ್ಲಿ ಭಾಗವಹಿಸುವವರಿಗಾಗಿ ವಿಶೇಷ ರೈಲು ಅಥವಾ ರೈಲು ಭೋಗಿಗಳನ್ನು ವ್ಯವಸ್ಥೆ ಮಾಡಿಕೊಡಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.


ಆದರೆ ರೈಲಿನ ವ್ಯವಸ್ಥೆಗೆ ಕೇಂದ್ರ ಸರ್ಕಾರ ಒಪ್ಪದ ಕಾರಣ, ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖ ನಾಯಕರುಗಳನ್ನು ಸ್ವಂತ ಖರ್ಚಿನಲ್ಲಿ ದೆಹಲಿಗೆ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಅದರಂತೆ ಕೆಲವು ಸಚಿವರು ಶನಿವಾರವೇ ವಿಮಾನದ ಮೂಲಕ ದೆಹಲಿ ತಲುಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮತಗಳ್ಳತನ ಕಾಂಗ್ರೆಸ್ಸಿನ ಹತಾಶೆಯ ಆರೋಪ ಎಂದು ಬಿಜೆಪಿ ಪದೇಪದೇ ಹೇಳುತ್ತಿದೆ. ಆರೋಪ ಮಾಡುವವರು ಪ್ರಮಾಣ ಪತ್ರದ ಮೂಲಕ ತಮ ಹೇಳಿಕೆಯನ್ನು ಪುನರ್‌ಪ್ರತಿಪಾದಿಸಿದರೆ ತನಿಖೆ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಆದರೆ ಆರೋಪ ಮಾಡುವವರು ಪ್ರಮಾಣ ಪತ್ರದ ಮೂಲಕ ತಮ್ಮ ಹೇಳಿಕೆಯ ಮೇಲಿನ ಬದ್ಧತೆಯನ್ನು ಪುನರ್‌ಪ್ರತಿಪಾದಿಸಲು ನಿರಾಕರಿಸಿದ್ದಾರೆ. ಈವರೆಗೂ ಯಾವ ನಾಯಕರು ಈವರೆಗೂ ಪ್ರಮಾಣ ಪತ್ರ ಸಲ್ಲಿಸಿಲ್ಲ. ಹೀಗಾಗಿ ಕಾಂಗ್ರೆಸ್‌‍ನ ಪ್ರತಿಭಟನೆ ಕೇವಲ ರಾಜಕೀಯಕ್ಕೆ ಸೀಮಿತ ಎಂಬಂತಾಗಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು