Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ ಪಕ್ಷದಿಂದ ಒಳಮೀಸಲಾತಿ ಮತ್ತು ಮಾದಿಗ ಸಮುದಾಯಕ್ಕೆ ಅನ್ಯಾಯ, ಬೃಹತ್ ಹೋರಾಟ 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಮತ್ತು ಮಾದಿಗ ಸಮುದಾಯದ ಬಗ್ಗೆ ವಿರೋಧ ಮನೋಭಾವ ಹೊಂದಿದ್ದರಿಂದ ಒಳ ಮೀಸಲಾತಿ ಜಾರಿ ವಿಳಂಬವಾಯಿತು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ.ಹೆಚ್. ಮೋಹನ್ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ​ಒಳಮೀಸಲಾತಿ ಹೋರಾಟ: ಕಳೆದ 40-50 ವರ್ಷಗಳಿಂದ ಒಳಮೀಸಲಾತಿಗಾಗಿ ಸಕ್ರಿಯವಾಗಿ ಹೋರಾಟಗಳು ಮತ್ತು ಪ್ರತಿಭಟನೆಗಳು ನಡೆಯುತ್ತಾ ಬಂದಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷ ಒಳ ಮೀಸಲಾತಿ ಜಾರಿ ಮಾಡಲು ಮೀನಾಮೇಷ ಧೋರಣೆ ಹೊಂದಿತ್ತು ಎಂದು ಅವರು ಕಿಡಿಕಾರಿದರು.
​ನ್ಯಾಯಮೂರ್ತಿ ಸದಾಶಿವ ಆಯೋಗ ಮತ್ತು ಬಿಜೆಪಿ ಪಾತ್ರ: 2004ರಲ್ಲಿ ಸದಾಶಿವ ಆಯೋಗ ರಚನೆಯಾಗಿದ್ದರೂ
, 2008ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆಯೇ ಆಯೋಗಕ್ಕೆ ಅನುದಾನ ನೀಡಿ ಜೀವ ತುಂಬಲಾಯಿತು.

​ಕಾಂಗ್ರೆಸ್ ಸರ್ಕಾರದ ಮೇಲಿನ ಆರೋಪ: 2013 ರಿಂದ 2018ರ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಕಡತವನ್ನು ಮೂಲೆಗೆ ತಳ್ಳಿ ಮಾದಿಗ ಸಮುದಾಯಕ್ಕೆ ವಂಚನೆ ಮಾಡಿದೆ ಮತ್ತು ಒಳಮೀಸಲಾತಿಯನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ಮೋಹನ್ ಅವರು ಆರೋಪಿಸಿದರು. 

Advertisement

​ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ವಿಚಾರಣೆ: ಹೈದರಾಬಾದ್‌ನಲ್ಲಿ ನಡೆದ ಮಾದಿಗರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ಬೆಂಬಲ ನೀಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರ ಮೂಲಕ ಮಾದಿಗ ಸಮುದಾಯದ ಪರವಾಗಿ ಸಮರ್ಥವಾದ ಮಂಡಿಸಿತು. ಜೊತೆಗೆ ಬಿಜೆಪಿ ನಾಯಕರಾದ ನಾರಾಯಣಸ್ವಾಮಿ ಹಾಗೂ ಗೋವಿಂದ ಕಾರಜೋಳ ಅವರು ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರನ್ನು ನೇಮಿಸಿ ಹೋರಾಟ ನಡೆಸಿದ್ದರು ಎಂದು ಅವರು ಸ್ಮರಿಸಿದರು. 

​ಹಾಲಿ ಸರ್ಕಾರದ ವಿರುದ್ಧ ಆಗ್ರಹ: ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯು ಅಪೂರ್ಣವಾಗಿದೆ (ಉದಾಹರಣೆಗೆ: 15ಕ್ಕಿಂತ ಕಡಿಮೆ ಹುದ್ದೆಗಳಿದ್ದಲ್ಲಿ ಅನ್ವಯಿಸದಿರುವುದು ಹಾಗೂ ಬಡ್ತಿಯಲ್ಲಿ ಒಳಮೀಸಲಾತಿ ನೀಡದಿರುವುದು). ಇದನ್ನು ಸರಿಪಡಿಸಿ ಸಂಪೂರ್ಣ ಒಳಮೀಸಲಾತಿಯನ್ನು ಜಾರಿಗೆ ತರಬೇಕು, ಬಡ್ತಿಯಲ್ಲೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು. 

​SCP/TSP ಅನುದಾನ ದುರ್ಬಳಕೆ: ಕಳೆದ ಮೂರು ವರ್ಷಗಳಲ್ಲಿ SCP/TSP ಯ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಟೀಕಿಸಿ, ಈ ಸಮಾವೇಶದ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿರುವುದಾಗಿ ತಿಳಿಸಿದರು.

ಬಿಜೆಪಿ ಮುಖಂಡ ಹಾಗೂ ನಿವೃತ್ತ ಸಹಾಯಕ ಪ್ರಾಧ್ಯಾಪಕ ಎಲ್.ನಾಗರಾಜಪ್ಪ ಅವರು ಮಾತನಾಡಿ ರಾಜಕೀಯ ಪಕ್ಷಗಳು ಸಮಾಜಕ್ಕೆ ಮಾಡಿರುವ ಅನ್ಯಾಯ, ದ್ರೋಹ ಮತ್ತು ಮೋಸವನ್ನು ಎತ್ತಿ ತೋರಿಸುವುದು ಎಂದು ತಿಳಿಸಿದರು.  ​ಸಮುದಾಯದ ಅಭಿವೃದ್ಧಿ: ಮುಂಬರುವ ದಿನಗಳಲ್ಲಿ ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುವಂತೆ ಮಾಡುವುದು. 

​ಜಾಗೃತಿ ಮೂಡಿಸುವುದು: ತುಳಿತಕ್ಕೆ ಒಳಗಾದ, ಶೋಷಿತ ಹಾಗೂ ಮೂಲೆಮೂಲೆಯಲ್ಲಿರುವ ಸಮಾಜದ ಜನರಲ್ಲಿ ಅರಿವು ಮೂಡಿಸಿ, ಅವರನ್ನು ಮುಖ್ಯವಾಹಿನಿಗೆ ತರುವುದು ಎಂದರು. 

​ಸಾರಿಗೆ ವ್ಯವಸ್ಥೆ: ಈ ಸಮಾವೇಶಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 5 ರಿಂದ 10 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಜನರು ಆಗಮಿಸಲಿದ್ದಾರೆ. 

​ಕಾರ್ಯಕ್ರಮದ ಯಶಸ್ಸು: ಶಿಸ್ತು ಮತ್ತು ಸಂಯಮದಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಸಮಾಜವನ್ನು ಸಂಘಟಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವುದು ಉದ್ದೇಶವಾಗಿದೆ ಎಂದು ಹೇಳಿದರು. 

​ಮಾಜಿ ತಾಪಂ ಅಧ್ಯಕ್ಷ ಬಿ.ಜಯಪ್ಪ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ ಸೇವಾ ಸಂಕಲ್ಪ ಅಭಿಯಾನ ಆಯೋಜನಾ ಸಮಿತಿ, ಚಿತ್ರದುರ್ಗ ಜಿಲ್ಲೆ ವತಿಯಿಂದ "ಮಾದಿಗ ಕಾರ್ಯಕರ್ತರ ಜಿಲ್ಲಾ ಸಮಾವೇಶ-2026" ಹಾಗೂ 'ಮಾದಿಗ ಮುನ್ನಡೆ - II' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. 

​​ಸೆಪ್ಟೆಂಬರ್-30ರಂದು ಬುಧವಾರ ಬೆಳಿಗ್ಗೆ 11.00 ಗಂಟೆಗೆ  ನಗರದ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.  ​

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಸಂಸದ​ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆ ವಹಿಸುವುರು.

​ಸಂಸದರು ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಜಿ.ಎಂ. ಸಿದ್ದೇಶ್ವರ್, ಎ. ನಾರಾಯಣಸ್ವಾಮಿ, ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜನ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮತ್ತು ಬಿಜೆಪಿ ಮುಖಂಡ ಬಿ.ಸಿ ಹನುಮಂತೇಗೌಡ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

​ಸನ್ಮಾನಿತರು:
ಈ ಕಾರ್ಯಕ್ರಮದಲ್ಲಿ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
, ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಡಾ.ಹೆಚ್. ವಿಶ್ವನಾಥ್ ಅವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು. 
ಸುದ್ದಿಗೋಷ್ಠಿಯಲ್ಲಿ ಪ್ರಹ್ಲಾದ್, ಚೇತನ್ ಕುಮಾರ್, ಪರಶುರಾಂ, ದಯಾನಂದ್, ರವಿ, ತಿಪ್ಪೇಸ್ವಾಮಿ, ಕುಮಾರ್, ನಾಗರಾಜ್, ಹನುಮಂತಪ್ಪ ಮತ್ತಿತರರು ಇದ್ದರು.​

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ