Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸಚಿವ ಪ್ರಿಯಾಂಕ್ ಖರ್ಗೆಯ ಬಂಧನ ಅಗತ್ಯತೆಯಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಟೆಂಡರ್‌ ಫಿಕ್ಸಿಂಗ್‌ ಕುಖ್ಯಾತಿಯ ಸಚಿವ ಟ್ರೋಲ್ ಪ್ರಿಯಾಂಕ್ ಖರ್ಗೆ ಅವರ ಹಿಂದೆ ಮುಂದೆ ಸುತ್ತಾಡಿಕೊಂಡಿದ್ದ ಕೊಲೆಗಾರ ರಾಜು ಕಪನೂರನ್ನು ಪ್ರಕರಣ ದಾಖಲಾಗಿ 15 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ!! ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಡೆತ್‌ನೋಟ್‌ನಲ್ಲಿ ಹೆಸರು ಬರೆದಿಟ್ಟರೂ ಒಬ್ಬ ಆರೋಪಿಯನ್ನು ಬಂಧಿಸಲು 15 ದಿನಗಳು ತೆಗೆದುಕೊಂಡಿದ್ದಾರೆ ಎಂದರೆ, ಇನ್ನು ಈ ಪ್ರಕರಣದಲ್ಲಿ ಮೃತ ಸಚಿನ್‌ ಪಾಂಚಾಳ್‌ ಕುಟುಂಬಕ್ಕೆ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಹೇಗೆ ನ್ಯಾಯ ದೊರೆಯಲು ಸಾಧ್ಯ..?? ಎಂದು ಬಿಜೆಪಿ ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ಅವರೆ, ಸಾಕ್ಷಿಗಳೆಲ್ಲವನ್ನೂ ನಾಶ ಮಾಡಿ, ಕಪನೂರನ್ನು ಬಂಧಿಸಿದರೆಷ್ಟು..?? ಬಿಟ್ಟರೆಷ್ಟು..?? ಎಂದು ಬಿಜೆಪಿ ಟೀಕಿಸಿದೆ.
ಸಚಿನ್‌ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದರೆ
, ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದರೆ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಬಿಜೆಪಿ ಆಗ್ರಹಿಸುತ್ತದೆ ಎಂದಿದೆ.

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಬಂಧನವಾಗಿದೆ. ಪ್ರಕರಣ ನಡೆದು ಎರಡು ವಾರ ಕಳೆದ ಬಳಿಕ ಆರೋಪಿಯನ್ನು ಬಂಧಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಸರ್ಕಾರವೇ ಅವಕಾಶ ಒದಗಿಸಿಕೊಟ್ಟಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತ ರಾಜು ಕಪನೂರು ಒಬ್ಬ ಗ್ಯಾಂಗ್ ಮಾಸ್ಟರ್ ಅಷ್ಟೇ, ಸಚಿವ ಪ್ರಿಯಾಂಕ್ ಖರ್ಗೆ ಇದರ ರಿಂಗ್ ಮಾಸ್ಟರ್.‌ ಮರಿ ಖರ್ಗೆಯನ್ನು ಬಂಧಿಸುವ ಧಮ್ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಇದೆಯಾ? ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಡೆತ್‌ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆಯ ಹೆಸರೂ ಉಲ್ಲೇಖವಾಗಿರುವುದರಿಂದ‌ ಮೃತನಿಗೆ ನ್ಯಾಯ ಒದಗಿಸಬೇಕಾದರೆ ಸಚಿವ ಖರ್ಗೆಯ ಬಂಧನದ ಅಗತ್ಯತೆಯಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ರಿಂಗ್ ಮಾಸ್ಟರ್ ಪ್ರಿಯಾಂಕ್‌ ಖರ್ಗೆಯ ಬಂಧನವೆಂದು? ಬಿಜೆಪಿ ಪ್ರಶ್ನಿಸಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು