Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Business News

ಟಿಎಪಿಸಿಎಂಎಸ್ ರೈತ ಪರ ಕೆಲಸ ಮಾಡಲಿ-ಸಚಿವ ಸುಧಾಕರ್

ಟಿಎಪಿಸಿಎಂಎಸ್ ರೈತ ಪರ ಕೆಲಸ ಮಾಡಲಿ-ಸಚಿವ ಸುಧಾಕರ್
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ನೂತನ ವಾಣಿಜ್ಯ ಮಳಿಗೆಗಳ ಕಟ್ಟಡದ ಶಂಕು ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ನೆರವೇರಿಸಿದರು.

ನಂತರ ಮಾತನಾಡಿದ ಅವರು ರೈತ ಸ್ನೇಹಿಯಾಗಿ ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘ ಕೆಲಸ ಮಾಡುತ್ತಿದೆ. ಜೊತೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಆರ್ಥಿಕವಾಗಿ ಬಲಿಷ್ಠವಾಗಬೇಕಿದೆ ಎಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಶ್ರಾವಣಗೆರೆ ಎಸ್ ಜೆ ಹನುಮಂತರಾಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್ ಅವರ ಸಹಕಾರ, ಸಲಹೆ ಸೂಚನೆಗಳಿಂದ ಸಂಘವನ್ನು ಬಲಿಷ್ಠವಾಗಿ ಕಟ್ಟಲಾಗುತ್ತದೆ. ರೈತರ ಹಿತದೃಷ್ಠಿಯಿಂದ ಹಲವು ರೈತ ಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಜೆ.ಆರ್.ಅಜಯ್ ಕುಮಾರ್, ಟಿಎಪಿಸಿಎಂಎಸ್ ಉಪಾಧ್ಯಕ್ಷೆ ಅನಿತಾ, ಸದಸ್ಯ ಮಹೇಶ್, ಕಾಂಗ್ರೆಸ್ ಮುಖಂಡ ಕಂದಿಕೆರೆ ಜಗದೀಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ ಖಾದಿ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಸಾದತ್, ದಿಂಡವಾರ ಮಹೇಶ್, ಅಜೀಜ್, ವಿ ಶಿವಕುಮಾರ್ ಮತ್ತಿತರರು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ರಾಘವೇಂದ್ರ ಸೌಹಾರ್ದ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ತಂತ್ರಜ್ಞಾನ ಆಧಾರಿತ ಸೇವೆಗಳ ಭರವಸೆಹಿರಿಯೂರು:ಪೌರಕಾರ್ಮಿಕರ ದಿನಾಚರಣೆ ಕ್ರೀಡಾಕೂಟಕ್ಕೆ ಭಕ್ತಿಗೆ ಚಾಲನೆ ನೀಡಿದ ಪೌರಾಯುಕ್ತ ಎ. ವಾಸೀಂಬದುಕನ್ನು ಅಳೆಯಬೇಡ — ಬದುಕಿನ ಅರ್ಥವನ್ನು ಅರಿತುಕೋಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಪೇಜಾವರ ಶ್ರೀಗಳ ಭೇಟಿ: ಶ್ರೀ ವಿಶ್ವಪ್ರಸನ್ನ ತೀರ್ಥರ ಆಶೀರ್ವಾದ ಪಡೆದ ದಿವ್ಯಕ್ಷಣಚಿತ್ರದುರ್ಗ: 25,000 ಲಂಚ ಸ್ವೀಕರಿಸುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆಏಷ್ಯನ್ ಗೇಮ್ಸ್ 2026: ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಚಾರಿತ್ರಿಕ ಚಿನ್ನದ ಪದಕ, ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆಜಿಬಿಎಯಿಂದ 'ಇ-ಆಸ್ತಿ 2.0' ಆಸ್ತಿ ಮತ್ತು ಇ-ಖಾತಾ ವ್ಯವಸ್ಥೆ ಲೋಕಾರ್ಪಣೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿಯುಪಿಐ (MDR) ಶುಲ್ಕ ನಿರ್ಧಾರಕ್ಕೆ ಪ್ರಿಯಾಂಕ ಖರ್ಗೆ ಆಕ್ಷೇಪ:ಆರ್‌ಟಿಒ ಕಚೇರಿಗಳಲ್ಲಿ ಅಕ್ರಮ, ದಲ್ಲಾಳಿಗಳ ಹಾವಳಿ: ಸರ್ಕಾರದ ವಿರುದ್ಧ ಸಿ.ಟಿ. ರವಿ ವೀಟೋ ದಾಳಿ  ರಾಷ್ಟ್ರಗೀತೆ 'ವಂದೇ ಮಾತರಂ' ಕುರಿತ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಶಿವಕುಮಾರ್‌ಗೆ ರಾಜ್ಯಪಾಲರ ಪತ್ರ