Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಚಿತ್ರದುರ್ಗ ವೈದ್ಯಕೀಯ ಕಾಲೇಜು ನಿರ್ದೇಶಕರ ಕಾರ್ಯವೈಖರಿಗೆ ಕಿಡಿಕಾರಿದ ಸಚಿವರು, ಶಾಸಕರು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದೇಶಕರ ಕಾರ್ಯವೈಖರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಿಡಿಕಾರಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಚಿವರಲ್ಲದೆ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ನಿರ್ದೇಶಕರ ನಡೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

      ಚಿತ್ರದುರ್ಗ  ವೈದ್ಯಕೀಯ ಕಾಲೇಜು ವೈದ್ಯರ ನೇಮಕಾತಿ ಸಂದರ್ಶನ ಚಿತ್ರದುರ್ಗದ ಬದಲಾಗಿ ಬೆಂಗಳೂರಿನಲ್ಲಿ ಯಾಕೆ ನಡೆಸಿದಿರಿ, ತಜ್ಞ ವೈದ್ಯರಿಗೆ ಗೌರವಧನ ನೀಡಿ, ಚಿತ್ರದುರ್ಗದಲ್ಲಿಯೇ ಸಂದರ್ಶನ ಏರ್ಪಡಿಸಬಹುದಿತ್ತು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವೈದ್ಯಕೀಯ ಕಾಲೇಜು ನಿರ್ದೇಶಕರನ್ನು ಪ್ರಶ್ನಿಸಿದ ಅವರು,

ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದಂತೆ ವಾರಕ್ಕೊಮ್ಮೆ ಜಿಲ್ಲಾಧಿಕಾರಿ ಹಾಗೂ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದು ಸೂಕ್ತ ಎಂದರು.  ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಎಲ್ಲರ ಪ್ರಯತ್ನದ ಫಲವಾಗಿ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿದೆ.

ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಕಟ್ಟಡಗಳು, ವಿದ್ಯಾರ್ಥಿ ನಿಲಯ, ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಆದಾಗ್ಯ ವೈದ್ಯರ ನೇಮಕಾತಿ ಸಂದರ್ಶನ ಬೆಂಗಳೂರಿನಲ್ಲಿ ಮಾಡುವ ಅನಿವಾರ್ಯತೆ ಏನಿತ್ತು. ನಿಮ್ಮದೇ ತೀರ್ಮಾನ ಮಾಡುತ್ತಿರಾ ಎಂದು ಪ್ರಶ್ನಿಸಿದರು.  ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು, ವೈದ್ಯಕೀಯ ಕಾಲೇಜಿಗೆ ವೈದ್ಯರ ನೇಮಕಾತಿಯಲ್ಲಿ ಬಹಳಷ್ಟು ದೂರುಗಳು ಕೇಳಿಬರುತ್ತಿವೆ.   ಬಗ್ಗೆ ನೊಂದವರೇ ನಮ್ಮ ಗಮನಕ್ಕೆ ತಂದಿದ್ದಾರೆ ಎಂದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ