E-PAPER
24 Nov 2026, 04:39:12 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರಿನಲ್ಲಿ 8 ತಿಂಗಳಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರ ಪತ್ತೆ: ಒಬ್ಬಳು ಈಗ ಗರ್ಭಿಣಿ

​ ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜಧಾನಿಯ ವಿದ್ಯಾರಣ್ಯಪುರದಿಂದ ಎಂಟು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಸುರಕ್ಷಿತವಾಗಿ ಪತ್ತೆಯಾದ ಯುವತಿಯರಾಗಿದ್ದಾರೆ.

​ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ಆದೇಶ:
ಕಳೆದ ಜನವರಿ
31 ರಂದು ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟಿದ್ದ ಈ ಇಬ್ಬರೂ ವಿದ್ಯಾರ್ಥಿನಿಯರು ಮನೆಗೆ ಮರಳಿರಲಿಲ್ಲ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರಂಭಿಕ ತನಿಖೆ ನಡೆದರೂ ಯಾವುದೇ ಪ್ರಮುಖ ಸುಳಿವು ಸಿಕ್ಕಿರಲಿಲ್ಲ. ತರುವಾಯ ತನಿಷ್ಕಾ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ, ಪ್ರಕರಣದ ಗಂಭೀರತೆ ಪರಿಗಣಿಸಿದ ನ್ಯಾಯಾಲಯ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿತ್ತು.

​ತನಿಖೆಯ ಮಹತ್ವದ ತಿರುವುಗಳು:
​ಮಲೆ ಮಹದೇಶ್ವರ ಬೆಟ್ಟದ ಸುಳಿವು: ತನಿಖೆಯ ವೇಳೆ ಯುವತಿಯರು ಆರಂಭದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದು ಬೆಳಕಿಗೆ ಬಂದಿತ್ತು. ಅಲ್ಲಿ ಕನಕಪುರ ಮೂಲದ ಯುವಕನೊಬ್ಬನ ಪರಿಚಯವಾಗಿತ್ತು.

​ಅನಾಥರೆಂದು ಸುಳ್ಳು ಹೇಳಿದ್ದ ಯುವತಿಯರು: ಮನೆಯಲ್ಲಿದ್ದ ಕೌಟುಂಬಿಕ ಒತ್ತಡಕ್ಕೆ ಹೆದರಿದ್ದ ತನಿಷ್ಕಾ, "ನಾವಿಬ್ಬರೂ ಅಕ್ಕ-ತಂಗಿ, ನಮಗೆ ಯಾರೂ ಇಲ್ಲ" ಎಂದು ಸುಳ್ಳು ಹೇಳಿ ಆ ಯುವಕನ ಜೊತೆ ತೆರಳಿದ್ದರು.

​ಮದುವೆ ಮತ್ತು ಸಂಸಾರ: ಬಳಿಕ ಆ ಯುವಕ ತನಿಷ್ಕಾಳನ್ನು ಮದುವೆಯಾಗಿದ್ದು, ತೇಜಸ್ವಿನಿಯನ್ನು ತಂಗಿಯಂತೆ ಜೊತೆಯಲ್ಲಿಟ್ಟುಕೊಂಡಿದ್ದನು.

​ಸಿಐಡಿ ಬಲೆಗೆ ಬಿದ್ದಿದ್ದು ಹೇಗೆ?
ಇತ್ತೀಚೆಗೆ ತನಿಷ್ಕಾ ಹೊಸ ಸಿಮ್ ಕಾರ್ಡ್ ಪಡೆಯಲು ತನ್ನ ಮೂಲ ಆಧಾರ್ ಕಾರ್ಡ್ ನೀಡಿದ್ದಳು. ಸಿಐಡಿ ಅಧಿಕಾರಿಗಳು ಈಗಾಗಲೇ ನಾಪತ್ತೆಯಾದ ಯುವತಿಯರ ಆಧಾರ್ ಸಂಖ್ಯೆಯ ಮೇಲೆ ಕಣ್ಣಿಟ್ಟಿದ್ದರಿಂದ
, ಟೆಲಿಕಾಂ ಸಂಸ್ಥೆಯಿಂದ ತಕ್ಷಣವೇ ಮಾಹಿತಿ ಲಭ್ಯವಾಯಿತು. ಆಧಾರ್ ನೆಟ್‌ವರ್ಕ್ ಲೊಕೇಶನ್ ಬೆನ್ನತ್ತಿದ ಸಿಐಡಿ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದೆ.

​ಪ್ರಸ್ತುತ ತನಿಷ್ಕಾ ಗರ್ಭಿಣಿಯಾಗಿದ್ದು, ಸಿಐಡಿ ಪೊಲೀಸರು ಇಬ್ಬರನ್ನೂ ಹೈಕೋರ್ಟ್ ಮುಂಭಾಗ ಹಾಜರುಪಡಿಸುವ ಪ್ರಕ್ರಿಯೆ ನಡೆಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!