Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್‌ಐಟಿ ರಚನೆಗೆ ತಾಯಿ ಕುಸುಮಾವತಿ ಅಸಮಾಧಾನ; ಕೆಲ ಅಧಿಕಾರಿಗಳ ನೇಮಕಕ್ಕೆ ತೀವ್ರ ವಿರೋಧ

ಚಂದ್ರವಳ್ಳಿ ನ್ಯೂಸ್, ಮಂಗಳೂರು:
2012ರಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆಗೀಡಾದ ತಮ್ಮ ಪುತ್ರಿ ಸೌಜನ್ಯ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ ನೇಮಕಗೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಮೃತೆಯ ತಾಯಿ ಕುಸುಮಾವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಸುಮಾವತಿ, ಸರ್ಕಾರದ ಹಾಲಿ ಎಸ್‌ಐಟಿ ರಚನೆಯಿಂದ ತಮಗೆ ಸಂಪೂರ್ಣ ತೃಪ್ತಿಯಾಗಿಲ್ಲ ಎಂದು ತಿಳಿಸಿದ್ದಾರೆ. ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಹಾಗೂ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

Advertisement

ಆದರೆ, ಎಸ್‌ಐಟಿ ಮುಖ್ಯಸ್ಥರು ಹಾಗೂ ಅಧಿಕಾರಿಗಳ ನೇಮಕಾತಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದಿಲ್ಲ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಪ್ರಕರಣದ ಪಾರದರ್ಶಕ ತನಿಖೆ ನಡೆಸಿ ನೈಜ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸಮರ್ಥ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ಮಾತ್ರ ಎಸ್‌ಐಟಿಗೆ ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

"ಎಸ್‌ಐಟಿಗೆ ನೇಮಕಗೊಂಡಿರುವ ಕೆಲವು ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸಲು ಸೂಕ್ತರಲ್ಲ. ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್‌ಗೆ ನಾವು ಕೃತಜ್ಞರಾಗಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ನ್ಯಾಯಯುತ ತನಿಖೆ ನಡೆಸಲು ಸಮರ್ಥ ತನಿಖಾಧಿಕಾರಿಗಳ ಹೊಸ ತಂಡ ರಚಿಸಿ, ನನ್ನ ಪುತ್ರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಸರ್ಕಾರವನ್ನು ಕಳಕಳಿಯಿಂದ ಮನವಿ ಮಾಡುತ್ತೇನೆ" ಎಂದರು.

ಕಳೆದ 14 ವರ್ಷಗಳಲ್ಲಿ ನಡೆದ ವಿವಿಧ ಹಂತದ ತನಿಖೆಗಳು ನೈಜ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿವೆ. ಕನಿಷ್ಠ ಈಗಲಾದರೂ ಹೊಸ ಎಸ್‌ಐಟಿ ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಪ್ರಕರಣದ ಪಾರದರ್ಶಕ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಆಕ್ಷೇಪ:
ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಕೂಡ ಪ್ರತ್ಯೇಕ ಪತ್ರಿಕಾ ಪ್ರಕಟಣೆ ಹೊರಡಿಸಿ, ಎಸ್‌ಐಟಿಗೆ ನೇಮಕಗೊಂಡಿರುವ ಪೊಲೀಸ್ ಅಧಿಕಾರಿಗಳಾದ ಎನ್. ಶಶಿಕುಮಾರ್ ಮತ್ತು ವೆಂಕಟೇಶ್ ಪ್ರಸನ್ನ ಅವರನ್ನು ತಕ್ಷಣವೇ ಎಸ್‌ಐಟಿಯಿಂದ ಕೈಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ಭ್ರಷ್ಟಾಚಾರ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಿನ್ನೆಲೆ (ಸೌಜನ್ಯ ಸಾವು): ಉಜಿರೆಯ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ, 2012ರ ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ನಾಪತ್ತೆಯಾಗಿದ್ದಳು. ಮರುದಿನ ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕ್ರೂರವಾಗಿ ಕೊಲೆ ಮಾಡಿರುವುದು ದೃಢಪಟ್ಟಿತ್ತು. ಅಂದಿನಿಂದಲೂ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟ ಈಗ ಎಸ್‌ಐಟಿ ತನಿಖೆಯ ಹಂತ ತಲುಪಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ