Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಅಂಗವಿಕಲರ ನಡೆ ರಾಜಕೀಯ ಕಡೆ ಅಭಿಯಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಅಂಗವಿಕಲರ ನಡೆ ರಾಜಕೀಯ ಕಡೆ ಅಭಿಯಾನ ಬೈಕ್ ರ್‍ಯಾಲಿ ಫೆ.೧೯ ರಂದು ಬೀದರ್ ಜಿಲ್ಲೆ ಬಸವಕಲ್ಯಾಣದಿಂದ ಹೊರಟು ೨೩ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ಖಜಾಂಚಿ ಎಂ.ತಿಪ್ಪಮ್ಮ ತಿಳಿಸಿದರು.


ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಸಾವಿರ ಬೈಕ್‌ಗಳಲ್ಲಿ ಬೆಂಗಳೂರು ಚಲೋ ರ್‍ಯಾಲಿ ಹೊರಡಲಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿಕಲಚೇತನರಿಗೆ ಶೇ. ೫ ರಷ್ಟು ಮೀಸಲಾತಿ ನೀಡಬೇಕು. ರಾಜ್ಯ ಸರ್ಕಾರ ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್‌ನಲ್ಲಿ ಅಂಗವಿಕಲರಿಗೆ ಬಜೆಟ್ ದ್ವಿಗುಣಗೊಳಿಸಬೇಕು. ಶಕ್ತಿ ಯೋಜನೆಯಡಿ ವಿಶೇಷ ಚೇತನ ಮಹಿಳೆಯರಿಗೆ ಒದಗಿಸಿರುವ ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ಪುರುಷ ವಿಶೇಷ ಚೇತನರಿಗೂ ವಿಸ್ತರಿಸಬೇಕು. ವಿಶೇಷ ಚೇತನರಿಗೆ ಪ್ರತಿ ತಿಂಗಳು ನೀಡುತ್ತಿರುವ ೧೪೦೦ ರೂ.ಮಾಶಾಸನವನ್ನು ಆರು ಸಾವಿರ ರೂ.ಗಳಿಗೆ ಹೆಚ್ಚಿಸಿ ಪ್ರತಿ ತಿಂಗಳು ಹತ್ತನೆ ತಾರೀಖಿನೊಳಗೆ ವಿಶೇಷ ಚೇತನರ ಕೈಸೇರಬೇಕೆಂದು ಒತ್ತಾಯಿಸಿದರು.

ಅನೇಕ ವರ್ಷಗಳಿಂದಲೂ ನಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ. ೨೦೦೦ ಇಸವಿಯಲ್ಲಿ ವಿಕಲಚೇತನರಿಗೆ ಬಸ್ ಪಾಸ್ ನೀಡಿದ್ದ ಸರ್ಕಾರ ನಂತರ ಆರು ನೂರು ರೂ.ಗಳನ್ನು ಕಟ್ಟಿಸಿಕೊಂಡು ಪಾಸ್ ನೀಡುತ್ತಿದೆ. ಇದು ನಿಲ್ಲಬೇಕು. ಬೆಳಗಾಂ, ಧಾರವಾಡ, ಹಾವೇರಿ, ದಾವಣಗೆರೆ

ಚಿತ್ರದುರ್ಗ, ಬಿಜಾಪುರ, ಬಾಗಲಕೋಟೆ, ಕೂಡ್ಲಿಗಿ, ಹೊಸಪೇಟೆ, ಗುಲ್ಬರ್ಗ, ಬೀದರ್, ಯಾದಗಿರಿ, ಕೊಪ್ಪಳ ಸೇರಿದಂತೆ ಅಷ್ಟ ದಿಕ್ಕುಗಳಿಂದ ಬೈಕ್‌ರ್‍ಯಾಲಿ ಬೆಂಗಳೂರಿಗೆ ಹೊರಡಲಿದೆ ಎಂದು  ಹೇಳಿದರು.

ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ಜಿಲ್ಲಾಧ್ಯಕ್ಷ ಪಾಪಣ್ಣ ಎಂ.ಎಸ್. ತಾಲ್ಲೂಕು ಅಧ್ಯಕ್ಷ ಪರಶುರಾಂ, ಕಾರ್ಯದರ್ಶಿ ರೇಷ್ಮಭಾನು, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಸುಜಾತ, ಸಲಹಾ ಸಮಿತಿ ಸದಸ್ಯ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು