E-PAPER
24 Nov 2026, 10:46:11 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಚಿತ್ರದುರ್ಗ ಕೇಂದ್ರೀಯ ವಿದ್ಯಾಲಯಕ್ಕೆ ಪ್ರವೇಶಾತಿ ಆರಂಭ: ಸಂಸದ ಕಾರಜೋಳ

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ದಶಕಗಳ ಕಾಲದ ಕನಸು ಕೊನೆಗೂ ನನಸಾಗಿದ್ದು
, ಚಿತ್ರದುರ್ಗ ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಅಧಿಕೃತವಾಗಿ ಕಾರ್ಯಾರಂಭ ಮಾಡಿದೆ.
2026-27ನೇ ಶೈಕ್ಷಣಿಕ ಸಾಲಿಗೆ 1ನೇ ತರಗತಿಯಿಂದ 5ನೇ ತರಗತಿಯವರೆಗೆ ದಾಖಲಾತಿ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

​ಪ್ರಸ್ತುತ ಈ ಶಾಲೆಯು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ವಿಭಾಗದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದೆ.

​ದಾಖಲಾತಿ ಪ್ರಕ್ರಿಯೆಯ ವಿವರಗಳು:
​1ನೇ ತರಗತಿ ಪ್ರವೇಶ: ಪೋಷಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.​ವೆಬ್‌ಸೈಟ್: admission.kvs.gov.in ​ಅವಧಿ: 20.03.2026 ರಿಂದ 02.04.2026ರವರೆಗೆ.

​2ನೇ ತರಗತಿಯಿಂದ 5ನೇ ತರಗತಿ ಪ್ರವೇಶ: ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
​ವಿಧಾನ: ಪೋಷಕರು ನೇರವಾಗಿ ಸರ್ಕಾರಿ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಪಡೆದು ಸಲ್ಲಿಸಬೇಕು.
​ಅವಧಿ:
02.04.2026 (ಬೆಳಿಗ್ಗೆ 10:00) ರಿಂದ 08.04.2026 (ಸಂಜೆ 4:00) ರವರೆಗೆ.

​ಪ್ರಮುಖ ಮಾಹಿತಿಗಳು:
​ಸೀಟುಗಳ ಮಿತಿ: ಪ್ರತಿ ತರಗತಿಗೆ ಕೇವಲ
40 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದೆ.

​ಕೊನೆಯ ದಿನಾಂಕ: ಆಯ್ಕೆಯಾದ ಮಕ್ಕಳು ದಾಖಲಾಗಲು 30.06.2026 ಕೊನೆಯ ದಿನವಾಗಿರುತ್ತದೆ.

​ಸೂಚನೆ: ಇದು ವಸತಿ ರಹಿತ ಶಾಲೆಯಾಗಿದ್ದು, ಯಾವುದೇ ಹಾಸ್ಟೆಲ್ ವ್ಯವಸ್ಥೆ ಇರುವುದಿಲ್ಲ. ​ದೀರ್ಘಕಾಲದ ಬೇಡಿಕೆಯಾಗಿದ್ದ ಈ ಶಾಲೆಯ ಸೌಲಭ್ಯವನ್ನು ಜಿಲ್ಲೆಯ ಪೋಷಕರು ಮತ್ತು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದರ ಆಪ್ತ ಸಹಾಯಕ ಸಿ.ಹೆಚ್. ದೇವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು