Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ನಗರಸಭೆ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಜನಸಾಮಾನ್ಯರ ಕೆಲಸ ಮಾಡಲು ಮೀನಾಮೇಷ ಎಣಿಸುತ್ತಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಕನ್ನಡ ಪಕ್ಷದ ಪದಾಧಿಕಾರಿಗಳು ಒತ್ತಾಯಿಸಿದರು.
 

ಭ್ರಷ್ಟ ಅಧಿಕಾರಗಳ ಕೂಪವಾಗಿರುವ ದೊಡ್ಡಬಳ್ಳಾಪುರ ನಗರಸಭೆ ವಿರುದ್ಧ ನಡೆದ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದರು.

  ನಗರಸಭೆಯ ಕಂದಾಯ ಶಾಖೆಯಲ್ಲಿನ ನಿರ್ಲಕ್ಷ್ಯ ಧೋರಣೆ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಿ ಜನ ಸಾಮಾನ್ಯರ ಕೆಲಸಗಳಿಗೆ ತೊಂದರೆ ಮಾಡುತ್ತಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

  ಕಂದಾಯ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲುವು ಭ್ರಷ್ಟ ಅಧಿಕಾರಿಗಳಂತು ಇ-ಖಾತೆಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಅಲೆಸುವುದರಲ್ಲಿ ಕಾಲ ಕಳೆಯುತ್ತಿದ್ದಾರೆ, ಮಧ್ಯವರ್ತಿಗಳ ಹಾವಳಿಯಂತು ಹೇಳತೀರದಾಗಿದೆ, ಮಧ್ಯವರ್ತಿಗಳ ಮೂಲಕ ಹೋದಂತಾ ಅರ್ಜಿಗಳನ್ನು ಬಹಳ ಮುತುವರ್ಜಿ ವಹಿಸಿ ವಾರದೊಳಗೆ ಇ-ಖಾತೆ ಮಾಡಿಕೊಡುವ ಅಧಿಕಾರಿಗಳು ಸಾಮಾನ್ಯ ಜನರಿಂದ ಹೋದ ಅರ್ಜಿಗಳನ್ನು ಮೂಟೆ ಕಟ್ಟಿ ಮೂಲೆಗೆ ಎಸೆದು ಇಲ್ಲ ಸಲ್ಲದ ನೆಪ ಹೇಳಿ ತಿಂಗಳಾನುಗಟ್ಟಲೆ ಅಲೆಸುವ ದೃಶ್ಯ ಸಾಮಾನ್ಯವಾಗಿದೆ ಎಂದು ಆರೋಪಿಸಿದರು. 

  ಆರೋಗ್ಯ ಶಾಖೆಯಲ್ಲೂ, ಜನನ, ಮರಣ ಪ್ರಮಾಣ ಪತ್ರ ಪಡೆಯಲು ಇಂತಿಷ್ಟು ವಸೂಲಿ ಆಗುತ್ತಿದೆ. ಈ ಇಂದೆ 2009ರಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭವಾದಾಗ ನಮ್ಮ ಕನ್ನಡ ಪಕ್ಷ ಇದು ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ಯಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು ನೀಡಿ ಪ್ರತಿಭಟಿಸಲಾಗಿತ್ತು ಆದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಾಗರೀಕರು ಇಂದು ಇಡೀ ಶಾಪ ಹಾಕುವಂತಾಗಿದೆ, ರಸ್ತೆಗಳಲ್ಲಿ ಒಡೆದು ಹಾಳಾಗಿರುವ ಚೇಂಬರ್ ಗಳನ್ನು ಈ ಕೂಡಲೇ ಸರಿಪಡಿಸಬೇಕು ಮತ್ತು ನಾಗರ ಕೆರೆಯಲ್ಲಿ ಹೋಗಿರುವ ಒಳಚರಂಡಿ ಮಾರ್ಗವನ್ನು ಈ ಕೂಡಲೇ ಬದಲಿಸಿ ಮೂರು ಹಂತಗಳಲ್ಲಿ ಶುದ್ಧಿಕರಣ ಕೈಗೊಂಡು ದೊಡ್ಡ ತುಮಕೂರು ಮತ್ತು ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಮತ್ತು ಜಾನುವಾರುಗಳಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕು ಎಂದರು. 

  ಕಂದಾಯ ಶಾಖೆಯಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟಿ ಜನ ಸಾಮಾನ್ಯರ ಕೆಲಸ ಮಾಡದೆ ವಿನಾಃ ಕಾರಣ ಅಲೆ ಸುತ್ತಿರುವ ಕೆಲವು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆ ಪೌರಾಯುಕ್ತರ ಕಾರ್ತಿಕೇಶ್ವರ್ ಅವರು, ಸಾಮಾನ್ಯ ದಿನಗಳಲ್ಲಿ ತಿಂಗಳಿಗೆ 50 ರಿಂದ 80 ಇ-ಖಾತೆಗಳನ್ನು ಮಾಡುತ್ತಿದ್ದೇವೆ. ಸರ್ಕಾರ ಬಿ ಖಾತಾ ಅಭಿಯಾನ ಪ್ರಾಂಭಿಸಿದ್ದರಿಂದ ಮಾರ್ಚ್ ನಿಂದ ಇಲ್ಲಿಯ ವರೆಗೆ 3700 ಅರ್ಜಿಗಳು ಬಂದಿವೆ, ಇನ್ನೂ ಬರುತ್ತಿವೆ, ಈಗಾಗಲೇ 2650 ಅರ್ಜಿಗಳನ್ನು ವಿಲೇವಾರಿ ಮಾಡಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆಯೂ ಇದೆ ಹಾಗಾಗಿ ತೊಂದರೆಗಳಾಗುತ್ತಿವೆ, ಆದಷ್ಟೂ ಬೇಗ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

   ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವನಾಯ್ಕ, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ರೈತ ಸಂಘದ ಮುತ್ತೇಗೌಡ, ಮೂರ್ತಿ, ಮುನಿನಾರಾಯಣಪ್ಪ, ಶಿವರಾಜ್ ಕುಮಾರ್ ಸಂಘದ ರಮೇಶ್, ಮುಖಂಡರಾದ ಮೋಹನ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು