Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮಾದರಿ ವಾರ್ಡ್ ಮಾಡುವ ಗುರಿ ನನ್ನದು-ಶ್ರೀನಿವಾಸ ರೆಡ್ಡಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
4 ನೇ ವಾರ್ಡ್ ಅರೇಹಳ್ಳಿ ಗುಡ್ಡದಹಳ್ಳಿ ಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಸಮಸ್ಯೆಗಳಿಗೆ ಪರಿಹಾರ ಹುಡುಕಿ ಮಾದರಿ ವಾರ್ಡ್ ಮಾಡುವ ಗುರಿ ನನ್ನದು ಎಂದು ಶ್ರೀನಿವಾಸ ರೆಡ್ಡಿ ಹೇಳಿದರು.


ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿಯ ಚುನಾವಣೆಯಲ್ಲಿ ಅರೇಹಳ್ಳಿ ಗುಡ್ಡದಹಳ್ಳಿ ನಾಲ್ಕನೇ ವಾರ್ಡಿನಿಂದ ಪಕ್ಷೇತರವಾಗಿ ಸ್ಪರ್ದಿಸಿರುವ ಶ್ರೀನಿವಾಸ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ ಭಾಷೆಟ್ಟಿ ಹಳ್ಳಿ ಗ್ರಾಮ ಪಂಚಾಯ್ತಿ ಅವಧಿ ಮುಗಿದು ನಾಲ್ಕು ವರ್ಷಗಳಾಗಿವೆ.

ಈ ಅವಧಿಯಲ್ಲಿ ಜನ ಪ್ರತಿನಿದಿಗಳಿಲ್ಲದ ಕಾರಣ ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮಗಳಲ್ಲಿ ಸಮಸ್ಯೆಗಳು ಹೇರಳವಾಗಿದ್ದು ಪರಿಹಾರಕ್ಕಾಗಿ ಜನ ಸಾಮಾನ್ಯರು ಪರದಾಡುವಂತಾಗಿದೆ. ಈಗ ಭಾಷೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆ ಗೇರಿದೆ.

ಈಗ ಮೊದಲ ಬಾರಿಗೆ ಪಟ್ಟಣ ಪಂಚಾಯ್ತಿ ಚುನಾವಣೆ ನಡೆಯಲಿದ್ದು ತಾನು ನಾಲ್ಕನೇ ವಾರ್ಡ್ ಅರೇಹಳ್ಳಿ ಗುಡ್ಡದಹಳ್ಳಿ ನಾಲ್ಕನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದೇನೆ. ನಾನು ಅರೇಹಳ್ಳಿ ಗುಡ್ಡಹಳ್ಳಿ ಸೇರಿದಂತೆ ಭಾಷೆಟ್ಟಿ ಹಳ್ಳಿ ವ್ಯಾಪ್ತಿಯಲ್ಲಿ ಚಿರಪರಿಚಿತನಾಗಿದ್ದೇನೆ.

ಪ್ರಸ್ತುತ ನಾಲ್ಕನೇ ವಾರ್ಡ್ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಪ್ರದೇಶವಾಗಿದೆ. ಭಾಷೆಟ್ಟಿ ಹಳ್ಳಿ ವ್ಯಾಪ್ತಿಯಲ್ಲಿ ನೂರಾರು ಕೈಗಾರಿಕೆಗಳಿದ್ದು ಪಂಚಾಯ್ತಿ ಅತ್ಯಂತ ಶ್ರೀಮಂತ ಪಂಚಾಯ್ತಿ ಎಂಬ ಹೆಸರಿದೆ. ಆದರೆ ವಾಸ್ತವವಾಗಿ ಇಲ್ಲಿನ ಗ್ರಾಮಗಳು ಬಡವಾಗಿವೆ ಎಂಬುದು ಸಾರ್ವತ್ರಿಕ ಸತ್ಯ. ಪ್ರಮುಖವಾಗಿ ಇಲ್ಲಿನ ಸಮಸ್ಯೆ ಗಳ ಬಗ್ಗೆ ನನಗೆ ಅರಿವಿದೆ. ಹಾಗಾಗಿ ಸಮಸ್ಯೆ ಗಳ ಪರಿಹಾರ ಕ್ಕಾಗಿ ನಾನು ಸ್ಪರ್ಧೆಗಿಳಿದಿದ್ದೇನೆ.

ಮುಖ್ಯವಾಗಿ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು. ಮುಖ್ಯವಾಗಿ ಗ್ರಾಮದ ಬೀದಿಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ. ಅದಕ್ಕಾಗಿ ಹೈಮಾಸ್ಕ್ ದೀಪಗಳ ಅಳವಡಿಕೆ. ಕುಡಿಯುವ ನೀರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವುದು. ಕೆರೆ ಶುದ್ದೀಕರಿಸಿ, ದಿನನಿತ್ಯ ವಾಯು ವಿಹಾರಕ್ಕೆ ಬರುವ ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ವಾಕಿಂಗ್ ಪಾತ್ ನಿರ್ಮಿಸುವುದು,

ವಾರ್ಡ್ ವ್ಯಾಪ್ತಿಯ ಆಟದ ಬಯಲಿನಲ್ಲಿ ಮಕ್ಕಳಿಗೆ ಮನರಂಜನೆ ಹಾಗೂ ಕ್ರೀಡೆ ಗಾಗಿ ಪರಿಕರಗಳನ್ನು ಒದಗಿಸುವುದು. ಊರಿನ ಮಧ್ಯಭಾಗದಲ್ಲಿ ವಿದ್ಯುತ್ ದೀಪದ ಜೊತೆಗೆ ಅಪರಾಧಗಳನ್ನು ನಿಯಂತ್ರಿಸಲು ಸಿ. ಸಿ. ಟಿ. ವಿ. ಗಳನ್ನು ಅಳವಡಿಸುವುದು. ಇವೆಲ್ಲಕ್ಕಿಂತ ಮುಖ್ಯವಾಗಿ ಸ್ಥಳೀಯ ನಿರುದ್ಯೋಗಿ ಯುವಕರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕೊಡಿಸುವುದು. ಈಗಾಗಲೇ ಉದ್ಯೋಗಕ್ಕಾಗಿ ಪರ ರಾಜ್ಯಗಳಿಂದ ವಲಸೆ ಬಂದು ನಮ್ಮ ಪರಿಸರವನ್ನು ಹಾಳುಗೆಡುವುತ್ತಿರುವ ವಲಸಿಗರನ್ನು ನಿಯಂತ್ರಿಸುವುದು.

ಭೂಮಿ ಕಳೆದುಕೊಂಡ ರೈತರ ಬದುಕಿನ ಆಸರೆಗಾಗಿ ಹೋರಾಟ ಮಾಡುವುದು ಸೇರಿದಂತೆ ಹತ್ತು ಹಲವು ಯೋಜನೆಗಳ ಅನುಷ್ಠಾನಗಳ ಗುರಿ ನನ್ನದು. ಈ ಎಲ್ಲಾ ಪ್ರಗತಿಯ ಗುರಿಯನಿಟ್ಟುಕೊಂಡು ಚುನಾವಣೆಗೆ ಸ್ಪರ್ದಿಸಿದ್ದೇನೆ. ಈಗಾಗಲೇ ನಾನು ಸಮಾಜಮುಖಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇನೆ. ಪಕ್ಷತೀತವಾಗಿ, ಜಾತ್ಯತೀತವಾಗಿ ಸ್ಥಳೀಯರು ನನ್ನ ಜೊತೆಗಿದ್ದಾರೆ. ಆದ್ದರಿಂದ ನಾಲ್ಕನೇ ವಾರ್ಡಿನ ಮತದಾರ ಬಂದುಗಳು ನನ್ನನ್ನು ಆಶೀರ್ವದಿಸಿ ಗೆಲ್ಲಿಸುತ್ತಾರೆಂಬ ವಿಶ್ವಾಸ ನನ್ನದು ಎಂದು ಶ್ರೀನಿವಾಸ್ ರೆಡ್ಡಿ ಹೇಳಿದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು