Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಕೈದಿಗಳಿಗೆ ಎನ್​ಡಿಪಿಎಸ್​​ ತಪಾಸಣೆ ಕಡ್ಡಾಯ-ಅಲೋಕ್ ಕುಮಾರ್

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಜೈಲುಗಳಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳ ನಿಯಂತ್ರಣ ಮಾಡಿ ಜೈಲುಗಳ ಸುಧಾರಣೆಗೆ ಮುಂದಾಗಿರುವ ರಾಜ್ಯ ಪೊಲೀಸ್ ಇಲಾಖೆ ಜೈಲಿಗೆ ಒಳ ಬರುವ ಮತ್ತು ಹೊರಗಡೆ ಹೋಗುವ ಕೈದಿಗಳಿಗೆ ಎನ್​ಡಿಪಿಎಸ್​​ ತಪಾಸಣೆ ಕಡ್ಡಾಯ ಮಾಡಲಾಗಿದೆ. ಇದರಿಂದ ಜೈಲಿನಲ್ಲಿಯೂ ಮಾದಕ ವಸ್ತು ಸರಬರಾಜು ಆಗುತ್ತದೆಯೇ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಅಲೋಕ್​ ಕುಮಾರ್ ಹೇಳಿದರು.

ಹುಬ್ಬಳ್ಳಿಯ ಉಪ ಕಾರಾಗೃಹಕ್ಕೆ ಬುಧವಾರ ದಿಢೀರ್ ಭೇಟಿ ನೀಡಿದ ಅವರು, ಜೈಲಿನ ಕಾರ್ಯವೈಖರಿ, ನಿರ್ವಹಣೆ, ಸುಧಾರಣೆ ಕುರಿತ ವಿಷಯಗಳ ಕುರಿತು ಅವರು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದರು.
ಸಬ್ ಜೈಲು ಕಟ್ಟಡ
, ಗಾರ್ಡನ್, ಕೈದಿಗಳಿಗೆ ಇರುವ ವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಕೈದಿಗಳ ಸೆಲ್​ಗಳನ್ನೂ ಸಹ ಪರಿಶೀಲನೆ ನಡೆಸಿ, ಸಜಾ ಬಂಧಿಗಳ ಜೊತೆ ಮಾತುಕತೆ ನಡೆಸಿದರು.

ಜೈಲು ಭೇಟಿ ಮಾಡಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯ ಕಾರಾಗೃಹದಲ್ಲಿ 132 ಕೈದಿಗಳಿದ್ದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕೈದಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಜೈಲಿನಲ್ಲಿ ಅವರು ದುಡಿಯುವಂತೆ ಮಾಡಲಾಗುತ್ತಿದೆ. ಕೈದಿಗಳು ಬಿಡುಗಡೆ ಆದ ಬಳಿಕ ಅವರ ಜೀವನಕ್ಕೆ ಸಹಕಾರಿಯಾಗಲು ಜೈಲಿನಲ್ಲಿಯೇ ಸ್ಕಿಲ್ ಡೆವಲಪ್​ಮೆಂಟ್ ತರಬೇತಿಗೆ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದರು.


ರಾಜ್ಯದ ಎಲ್ಲ ಜೈಲುಗಳಲ್ಲಿನ ಕೈದಿಗಳಿಗೆ ಯೋಗ, ಧ್ಯಾನ ಕಡ್ಡಾಯ ಮಾಡಲಾಗುವುದು. ಮೊದಲ ಬಾರಿ ಜೈಲು ಪ್ರವೇಶ ಮಾಡುವ ಅಪರಾಧಿಗಳಿಗೆ ಎನ್‌ಡಿಪಿಎಸ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಒಂದು ವಾರದ ನಂತರ ಇದನ್ನು ಜಾರಿಗೆ ತರಲಾಗುತ್ತದೆ. ಸಮಾಜವನ್ನು ಮಾದಕ ವಸ್ತು ಸೇವನೆಯಿಂದ ಮುಕ್ತಗೊಳಿಸಬೇಕಿದೆ. ನಾವು ಜೈಲಿನಿಂದಲೇ ಪ್ರಾರಂಭಿಸುತ್ತಿದ್ದೇವೆ. ಜೈಲಿಗೆ ಒಳಬರುವ ಮತ್ತು ಹೊರ ಹೋಗುವವರನ್ನು ತಪಾಸಣೆ ಮಾಡಲಾಗುತ್ತದೆ. ಜೈಲಿನಲ್ಲಿ ಎನ್​ಡಿಪಿಎಸ್ ತಪಾಸಣೆ ಕಡ್ಡಾಯ ಮಾಡಲಾಗುವುದು. ಮೊದಲ ಪ್ರಕರಣದ ಆರೋಪಿಗಳು ಮತ್ತು ಅಪರಾಧಿಗಳನ್ನು ರೂಢಾಪರಾಧಿಗಳ ಜೊತೆಗೆ ಸೇರದಿರಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಕೆಲ ದಿನಗಳ ಹಿಂದೆ ಅಲೋಕ್​ ಕುಮಾರ್ ಅವರು ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.
ಶತಮಾನದ ಇತಿಹಾಸ ಹೊಂದಿರುವ ಹಿಂಡಲಗಾ ಜೈಲಿನಲ್ಲಿ ಗಾಂಜಾ
, ಮೊಬೈಲ್ ಫೋನ್ ಪತ್ತೆ ಸೇರಿ ಹಲವು ವಿಚಾರಗಳಿಂದ ಈ ಹಿಂದೆ ಸುದ್ದಿಯಾಗಿತ್ತು.
ಈ ಹಿನ್ನೆಲೆಯಲ್ಲಿ
, ದಿಢೀರ್ ಭೇಟಿ ನೀಡಿದ ಡಿಜಿಪಿ‌ಅಲೋಕ್​ ಕುಮಾರ್, ಜೈಲು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು. ಜೈಲಿನ ಹೊರಗೆ ಮತ್ತು ಒಳಗಡೆ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಅಂತಾ ಇಲ್ಲಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಹಿಂಡಲಗಾ ಜೈಲು ಬಹಳ ಹಳೆಯದ್ದು. ಬೆಂಗಳೂರಿನ ಪರಪ್ಪನ ಅಗ್ರಹಾರದ ನಂತರ ಇದು ಪ್ರಮುಖ ಜೈಲಾಗಿದೆ. ರಾಜ್ಯದ ವಿವಿಧ ಭಾಗಗಳ ಮುಖ್ಯ ಆರೋಪಿಗಳು ಇಲ್ಲಿದ್ದಾರೆ.

ಹಳೆ ಕಟ್ಟಡ ಸೇರಿ ಹಲವು ಸಮಸ್ಯೆಗಳು ಇಲ್ಲಿವೆ. ಮೊಬೈಲ್, ಸಿಗರೇಟ್ ಹೊರಗಿನಿಂದ ಒಳಗೆ ಎಸೆಯುವುದನ್ನು ತಡೆಗಟ್ಟಬೇಕಿದೆ. ಒಳಗಡೆ 5ಜಿ ಜಾಮರ್ ಅಳವಡಿಸಿದರೂ ನೆಟ್​​ವರ್ಕ್ ಬರುತ್ತಿದೆ. ಅದನ್ನು ಪೂರ್ತಿ ಬಂದ್ ಮಾಡುವಂತೆ ಸೂಚಿಸಿದ್ದೇನೆ ಎಂದು ಡಿಐಜಿ ಅವರು ತಿಳಿಸಿದ್ದರು.

ಎನ್​ಡಿಪಿಎಸ್ ಏನಿದು​:
ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ
2021ರಲ್ಲಿ ಕೇಂದ್ರ ಸರ್ಕಾರ ಎನ್​ಡಿಪಿಎಸ್​ ತಿದ್ದುಪಡಿ ಮಸೂದೆ ಅಂಗೀಕರಿಸಿತ್ತು.

ಮೂಲಕ ದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟಕ್ಕೆ ಕಠಿಣ ನಿಯಮವನ್ನು ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದಿತ್ತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ