Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಆಹಾರದ ಗುಣಮಟ್ಟ ಕಾಪಾಡಲು ಅಗತ್ಯ ಕ್ರಮ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ, ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಗುಣಮಟ್ಟವಲ್ಲದ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.

ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ.

ಔಷಧ ಆಡಳಿತವು, ಏಪ್ರಿಲ್ 2025ರ ಮಾಹೆಯಲ್ಲಿ ಔಷಧ ಪರೀಕ್ಷಾ ಪ್ರಯೋಗಾಲಯ ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿಗಳಲ್ಲಿ ಒಟ್ಟು 1,353 ಔಷಧ ಮಾದರಿಗಳನ್ನು ವಿಶ್ಲೇಷಿಸಲಾಗಿದೆ. ಅವುಗಳಲ್ಲಿ 30 ಅನುತ್ತಮ ಗುಣಮಟ್ಟದದೆಂದು ಘೋಷಿಸಿರುತ್ತದೆ.

ಏಪ್ರಿಲ್ 2025ರ ಮಾಹೆಯಲ್ಲಿ ಅನುತ್ತಮ ಗುಣಮಟ್ಟದ ಔಷಧವೆಂದು ಘೋಷಿತವಾದ ಹಾಗೂ ಇತರ ಉಲ್ಲಂಘನೆಗಾಗಿ ವಿವಿಧ ತಯಾರಿಕ ಸಂಸ್ಥೆಗಳ ವಿರುದ್ಧ 37 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದೆ. ಔಷಧ ಆಡಳಿತ ವಿಭಾಗದಲ್ಲಿ 26 ಸೇವೆಗಳನ್ನು ಸಕಾಲದಡಿಯಲ್ಲಿ ಒದಗಿಸಲಾಗುತ್ತಿದ್ದು ಏಪ್ರಿಲ್ ಮಾಹೆಯಲ್ಲಿ 903 ಅರ್ಜಿಗಳನ್ನು ಸ್ವೀಕರಿಸಿದ್ದು, ಹಿಂದಿನ ಬಾಕಿ ಅರ್ಜಿಗಳು ಸೇರಿ ಒಟ್ಟು 993 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿರುತ್ತದೆ.

ಔಷಧ ಆಡಳಿತದ ಅಮಲುಜಾರಿ ಅಧಿಕಾರಿಗಳು ಏಪ್ರಿಲ್ 2025ರ ಮಾಹೆಯಲ್ಲಿ ಒಟ್ಟು 1,340 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆದಿರುತ್ತಾರೆ. 2,229 ಔಷಧ ಮಳಿಗೆಗಳನ್ನು ಪರಿವೀಕ್ಷಣೆ ಕೈಗೊಂಡಿರುತ್ತಾರೆ. ಅವುಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಒಟ್ಟು 128 ಸಂಸ್ಥೆಗಳ ಪರವಾನಿಗೆಗಳನ್ನು ಅಮಾನತ್ತುಗೊಳಿಸಲಾಗಿದೆ ಹಾಗೂ 07 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ.

ರಾಜ್ಯದಲ್ಲಿ ಎನ್.ಎಸ್.ಕ್ಯೂ ಬಂದಂತಹ ಪ್ರಕರಣಗಳಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಸುಮಾರು ರೂ 11.5 ಲಕ್ಷ ಮೌಲ್ಯದ ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿರುತ್ತದೆ ಬೆಂಗಳೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ