ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಘಟಕದ ಯುವ ಅಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಕ್ಟೋಬರ್ 03, 2026ರ ಶನಿವಾರದಂದು ಬೆಳಿಗ್ಗೆ 10:30 ಗಂಟೆಗೆ ಹಿರಿಯೂರಿನಲ್ಲಿ 'ರೈತ ಸ್ವಾಭಿಮಾನ ಯಾತ್ರೆ' ಮತ್ತು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನಾ ಪಾದಯಾತ್ರೆಯು ಹಿರಿಯೂರು ನಗರದ ರಂಜಿತ ಹೋಟೆಲ್ನಿಂದ ಪ್ರಾರಂಭವಾಗಿ ತಾಲೂಕು ಕಚೇರಿಯವರೆಗೆ ಸಾಗಲಿದೆ.
ಉದ್ದೇಶ: ಹಿರಿಯೂರು ತಾಲೂಕನ್ನು "ಬರ ಪೀಡಿತ ಪ್ರದೇಶ" ಎಂದು ಘೋಷಣೆ ಮಾಡಿದ್ದರೂ ಸಹ, ಇದುವರೆಗೆ ರಾಜ್ಯ ಸರ್ಕಾರವು ಯಾವುದೇ ಸೂಕ್ತ ಬರ ಪರಿಹಾರ ಕಾರ್ಯಗಳನ್ನು ಕೈಗೊಂಡಿರುವುದಿಲ್ಲ. ಆದ್ದರಿಂದ ಸರ್ಕಾರವನ್ನು ಎಚ್ಚೆತ್ತು ತಕ್ಷಣವೇ ತಾಲೂಕಿನಲ್ಲಿ ಬರ ಪರಿಹಾರ ಕಾಮಗಾರಿಗಳು ಹಾಗೂ ಕಾರ್ಯಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲು ಈ ಬೃಹತ್ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ರೈತ ಮುಖಂಡರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಾಲೂಕು ಜನತಾದಳ (ಜಾತ್ಯತೀತ) ಅಧ್ಯಕ್ಷರಾದ ಕೆ. ಶಂಕರ ಮೂರ್ತಿ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.




