Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

2028ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಪಣ ತೊಡಿ-ನಿಖಿಲ್

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಕ್ಕಲಿಗರ ಸಂಘದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ "ಜನರೊಂದಿಗೆ ಜನತಾದಳ" ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ಮಾತನಾಡಿದರು.

ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸುವಂತೆ ಅವರು ಕರೆ ನೀಡಿದರು.


 ನಿಖಿಲ್ ಅವರ ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು, ಮುಖಂಡರು ಬೂತ್ ಮಟ್ಟದಲ್ಲಿ ತಂಡಗಳನ್ನು ರಚಿಸಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕುವ ಮೂಲಕ 2028 ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂಬ ಸಂಕಲ್ಪವನ್ನು ಇದೇ ಸಂದರ್ಭದಲ್ಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ವೀರಭದ್ರಪ್ಪ, ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ ಆಂಜಿನಪ್ಪ, ತಾಲ್ಲೂಕು ಅಧ್ಯಕ್ಷ ಬಸವರಾಜ್, ಮುಖಂಡರಾದ ಗೋವಿಂದರಾಜ್, ಕೊಂಡವಾಡಿ ಚಂದ್ರಶೇಖರ್, ಗಂಗರಾಜು, ಸಿದ್ದಗಂಗಮ್ಮ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು