ಚಂದ್ರವಳ್ಳಿ ನ್ಯೂಸ್, ಪಾಟ್ನಾ:
ಬಿಹಾರದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುವ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ದೇಶದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆ ‘ನಿತೀಶ್ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ವೈಶಾಲಿ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆ ರಾಜ್ಯದ ಸಂಪರ್ಕ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ.
ಸುಮಾರು 4,280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 9.76 ಕಿಲೋಮೀಟರ್ ಉದ್ದದ ಆರು ಪಥಗಳ ಸೇತುವೆಯನ್ನು ಪ್ರಧಾನಿ ಮೋದಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಬಳಿಕ ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರೊಂದಿಗೆ ಸೇತುವೆಯ ಮೇಲೆ ಹೆಜ್ಜೆ ಹಾಕಿದರು.




