Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭಾರತ ಜನಗಣತಿಯಲ್ಲಿ ಗೊಂದಲ ಬೇಡ: ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಜನಗಣತಿ 2027ರ ಪೂರ್ವಸಿದ್ಧತಾ ಕಾರ್ಯಗಳು ಜಿಲ್ಲೆಯಲ್ಲಿ ಚುರುಕುಗೊಂಡಿದ್ದು
, ಗಣತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಜನಗಣತಿ ಅಧಿಕಾರಿ  ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಭಾರತ ಜನಗಣತಿ-2027ರ ಸಂಬಂಧ ಜಿಲ್ಲಾ ಅಧಿಕಾರಿಗಳು
, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನಗಣತಿ ಕಾರ್ಯವು ಯಶಸ್ವಿಯಾಗಲು ಬ್ಲಾಕ್‍ಗಳ ರಚನೆ ಅತ್ಯಂತ ಪ್ರಮುಖವಾಗಿದೆ. ಬ್ಲಾಕ್ ರಚನೆಯಲ್ಲಿ ಸಣ್ಣ ತಪ್ಪುಗಳಾದರೂ ಇಡೀ ಪ್ರಕ್ರಿಯೆ ಹಳಿ ತಪ್ಪುತ್ತದೆ.  ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಬ್ಲಾಕ್‍ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವ ವಾರ್ಡ್ ಬಿಲ್ ಕಲೆಕ್ಟರ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದ ಅವರು, ಗಣತಿದಾರರನ್ನು ನೇಮಿಸುವಾಗ ಅವರು ವಾಸಿಸುವ ಅಥವಾ ಕೆಲಸ ಮಾಡುವ ಬ್ಲಾಕ್‍ಗಳಲ್ಲೇ ನಿಯೋಜಿಸಬೇಕು. ಒಂದು ವೇಳೆ ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯರು ಲಭ್ಯವಿಲ್ಲದಿದ್ದರೆ, 200 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿ ಅಂಕಿ-ಅಂಶಗಳು ಅಡಿಪಾಯವಾಗಿದ್ದು, ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು ರಾಷ್ಟ್ರ ನಿರ್ಮಾಣದ ಅಳಿಲು ಸೇವೆಯಲ್ಲಿ ಭಾಗಿಗಳಾಗುತ್ತಿದ್ದೇವೆ ಎಂಬ ಭಾವನೆಯೊಂದಿಗೆ ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ಕೆಲಸ ಮಾಡಬೇಕು. ಸರ್ಕಾರಿ ನೌಕರರ ವೃತ್ತಿ ಜೀವನದಲ್ಲಿ ಚುನಾವಣೆ ಮತ್ತು ಜನಗಣತಿ ಕೆಲಸಗಳು ಅತ್ಯಂತ ಸ್ಮರಣೀಯವಾದವು. 1872ರಲ್ಲಿ ಮೊದಲ ಬಾರಿ ಆರಂಭವಾದ ಜನಗಣತಿ ಪ್ರಕ್ರಿಯೆ ಈಗ 16ನೇ ಜನಗಣತಿ ಹಂತಕ್ಕೆ ಬಂದು ನಿಂತಿದೆ. ಈ ಅಂಕಿ-ಅಂಶಗಳು ದೇಶದ ಆರ್ಥಿಕ ಗುರಿ ಮತ್ತು ಜನರ ಸ್ಥಿತಿಗತಿಗಳನ್ನು ತಿಳಿಯಲು ಬಹಳ ಮುಖ್ಯವಾಗಿದ್ದು, ನಿಖರತೆಯ ವಿಷಯದಲ್ಲಿ ಯಾವುದೇ ಅಜಾಗರೂಕತೆ ವಹಿಸಬಾರದು ಎಂದು ಎಚ್ಚರಿಸಿದರು.

ಕೋವಿಡ್ ಮಹಾಮಾರಿಯಿಂದಾಗಿ ಮುಂದೂಡಲ್ಪಟ್ಟಿದ್ದ ಈ ಜನಗಣತಿಯು ಈಗ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ನಡೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮರ್ಥವಾಗಿ ತರಬೇತಿ ಪಡೆದು ಕೆಲಸ ಆರಂಭಿಸಬೇಕು ಎಂದು ಸೂಚಿಸಿದರು.

ಈ ಬಾರಿಯ ಜನಗಣತಿಯು ಹಳೆಯ ಮ್ಯಾನುಯಲ್ ಪದ್ಧತಿ ಕೈಬಿಟ್ಟು, ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದ್ದು, ಇದು ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಿಸಲಿದೆ. ಪ್ರತಿ ವಾರ್ಡ್ ಅಥವಾ ಗ್ರಾಮ ಮಟ್ಟದಲ್ಲಿ 150 ರಿಂದ 200 ಕುಟುಂಬಗಳನ್ನು ಒಳಗೊಂಡ 'ಬ್ಲಾಕ್'ಗಳನ್ನು ಗುರುತಿಸಿ, ನಿಖರವಾದ ಬ್ಲಾಕ್ ನಕ್ಷೆ ಮತ್ತು ಪಟ್ಟಿಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದರು.

ಜನಗಣತಿ ಕಾರ್ಯಕ್ಕಾಗಿ ಎಣಿಕೆದಾರರು ಮತ್ತು ಮೇಲ್ವಿಚಾರಕರನ್ನು ಶೀಘ್ರವೇ ನೇಮಕ ಮಾಡಿ, ಅವರಿಗೆ ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲು ತಹಶೀಲ್ದಾರ್‍ಗಳಿಗೆ ನಿರ್ದೇಶನ ನೀಡಿದ ಅವರು, ‘ಭಾರತ ಜನಗಣತಿ 2027ಪ್ರಕ್ರಿಯೆಯು ಅತ್ಯಂತ ನಿಖರ ಮತ್ತು ವೈಜ್ಞಾನಿಕವಾಗಿ ನಡೆಯಬೇಕಿದೆ ಎಂದು ಹೇಳಿದರು.

ತರಬೇತಿ ಅಧಿಕಾರಿಗಳಾದ ವೈಭವ ಕೃಷ್ಣ, ಸೂರ್ಯನಾರಾಯಣ ಹಾಗೂ ಎಲ್.ಪಿ.ಅನುಜಾ ಅವರು ಜಣಗಣತಿ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ಮಾಸ್ಟರ್ ಟ್ರೈನರ್ ರಾಮಚಂದ್ರಪ್ಪ, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮ, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಮತ್ತಿತರರು ಇದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು