Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ನೆರೆಯ ಪಾಕಿಸ್ತಾನದಿಂದ ಯಾವುದೇ ಪರಮಾಣು ಬೆದರಿಕೆ ಇಲ್ಲ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನೆರೆಯ ಪಾಕಿಸ್ತಾನದಿಂದ ಯಾವುದೇ ಪರಮಾಣು ಬೆದರಿಕೆ ಇಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

ಆಪರೇಷನ್​ ಸಿಂಧೂರ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ಕುರಿತು ಸಂಸದೀಯ ಸ್ಥಾಯಿ ಸಮಿತಿಗೆ ವಿವರಣೆ ನೀಡಿದ ವಿಕ್ರಮ್ ಮಿಶ್ರಿ, ಸೇನಾ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನು ದ್ವಿಪಕ್ಷೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಎಂಬ ಸರ್ಕಾರದ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಆಪರೇಷನ್ ಸಿಂಧೂರ ನಡೆಸಿತ್ತು. ಇದರ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ನಾಲ್ಕು ದಿನಗಳ ಕಾಲ ಸೇನಾ ಸಂಘರ್ಷ ನಡೆಯಿತು. ತದನಂತರ, ಮೇ 10ರಂದು ಎರಡೂ ದೇಶಗಳು ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದು, ತಾನು ಮಧ್ಯಸ್ಥಿಕೆ ವಹಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದರು.

ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದವು. ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ನಿಲ್ಲಿಸಲು ನಿರ್ಧರಿಸಿದ ನಂತರ ಟ್ರಂಪ್ ಅವರ ಹಲವಾರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ವಿರೋಧ ಪಕ್ಷದ ಸದಸ್ಯರೊಬ್ಬರು ಕೇಳಿದಾಗ, ಅಮೆರಿಕ ಅಧ್ಯಕ್ಷರು ಹಾಗೆ ಮಾಡಲು ತಮ್ಮ ಅನುಮತಿ ಪಡೆದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವ್ಯಂಗ್ಯವಾಡಿದರು.

ಮಿಲಿಟರಿ ಕ್ರಮಗಳನ್ನು ನಿಲ್ಲಿಸಿದ ನಂತರ ಮಿಶ್ರಿಯನ್ನು ಟ್ರೋಲ್ ಮಾಡಿದ್ದನ್ನು ಸಮಿತಿ ಸದಸ್ಯರು ಸರ್ವಾನುಮತದಿಂದ ಖಂಡಿಸಿದರು ಮತ್ತು ಅವರ ವೃತ್ತಿಪರ ನಡವಳಿಕೆಯನ್ನು ಶ್ಲಾಘಿಸಿದರು ಎಂದು ಮೂಲಗಳು ತಿಳಿಸಿವೆ.

ಭಾರತದ ವಿರುದ್ಧ ಟರ್ಕಿಯ ಪ್ರತಿಕೂಲ ನಿಲುವಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಮಿಶ್ರಿ, ಆ ದೇಶವು ಸಾಂಪ್ರದಾಯಿಕವಾಗಿ ಭಾರತದ ಬೆಂಬಲಿಗನಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಅಧ್ಯಕ್ಷತೆಯಲ್ಲಿ ನಡೆದ ವಿದೇಶಾಂಗ ವ್ಯವಹಾರಗಳ ಸಂಸತ್ತಿನ ಸ್ಥಾಯಿ ಸಮಿತಿಯ ಸಭೆಯಲ್ಲಿ ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಕಾಂಗ್ರೆಸ್‌ನ ರಾಜೀವ್ ಶುಕ್ಲಾ ಮತ್ತು ದೀಪೇಂದರ್ ಹೂಡಾ, ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ ಮತ್ತು ಬಿಜೆಪಿಯ ಅಪರಾಜಿತ ಸಾರಂಗಿ ಹಾಗೂ ಅರುಣ್ ಗೋವಿಲ್ ಸೇರಿದಂತೆ ಹಲವಾರು ಸಂಸದರು ಭಾಗವಹಿಸಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ