Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಖಾಲಿ ನಿವೇಶನ ಸ್ವಚ್ಛಗೊಳಿಸಿ ಇಲ್ಲ ದುಪ್ಪಟ್ಟು ದಂಡ ಕಟ್ಟಲು ನೋಟಿಸ್ ಜಾರಿ ಮಾಡಿದ ನಗರಸಭೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭಾ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಖಾಲಿ ನಿವೇಶನಗಳಲ್ಲಿನ ಗಿಡ, ಮರ, ಮುಳ್ಳಿನ ಕಂಟಿಗಳನ್ನು ಕಡಿದು ಸ್ವಚ್ಛಗೊಳಿಸುವಂತೆ ನಗರಸಭೆ ಅಧ್ಯಕ್ಷ ಜೆ.ಆರ್.ಅಜೆಯ್‌ಕುಮಾರ್(ಅಜ್ಜಪ್ಪ) ಹಾಗೂ ಪೌರಾಯುಕ್ತ ಎ.ವಾಸೀಂ ಮನವಿ ಮಾಡಿದ್ದಾರೆ.

ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಗರ ವ್ಯಾಪ್ತಿಯ ನಿವೇಶನಗಳ ಆಸ್ತಿ ಮಾಲೀಕರು ಕೂಡಲೇ ಸ್ವಚ್ಛತೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿರಿಯೂರು ನಗರ ವ್ಯಾಪ್ತಿಯ ಖಾಲಿ ನಿವೇಶನ, ಮನೆಗಳ ಸುತ್ತ ಮುತ್ತಲಿನ ಖಾಲಿ ಜಾಗಗಳಲ್ಲಿ ಸಾಕಷ್ಟು ಮುಳ್ಳಿನ ಗಿಡ, ಮರಗಳು ಬೆಳೆದಿದ್ದು ವಿಷ ಜಂತುಗಳು ಆ ಮರಗಳ ಪೊದೆಯಲ್ಲಿ ಸೇರಿಕೊಂಡು ಸಾರ್ವಜನಿಕರಿಗೆ ಕಚ್ಚಿರುವ ಪ್ರಕರಣಗಳು ಇತ್ತೀಚಿಗೆ ನಡೆದಿವೆ.

ಅಲ್ಲದೆ ಮನೆ, ಖಾಲಿ ನಿವೇಶನಗಳಲ್ಲಿ ದೊಡ್ಡ ದೊಡ್ಡ ಮುಳ್ಳಿನ ಗಿಡ ಮರಗಳ ಪೊದೆಗಳಿರುವುದರಿಂದ ಕಳ್ಳತನ ಮಾಡಿದ ಕೊಳ್ಳರು ಸುಲಭವಾಗಿ ತಪ್ಪಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಕಳವು ಪ್ರಕರಣಗಳು ಮತ್ತು ವಿಷ ಜಂತುಗಳಿಂದ ಪ್ರಾಣ ಹಾನಿಯಾಗುತ್ತಿರುವುದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರಸಭೆ ವತಿಯಿಂದ ಈಗಾಗಲೇ ಖಾಲಿ ನಿವೇಶನಗಳ ಸ್ವಚ್ಛತೆಗೆ ಅನೇಕ ಸಲ ಮನವಿ ಮಾಡಿಕೊಂಡು ಹಲವು ಸೂಚನೆಗಳನ್ನು ನೀಡಿದ್ದರೂ ಸಹ ಆಸ್ತಿ ಮಾಲೀಕರು ಸಹಕರಿಸದೆ ಮುಳ್ಳಿನ ಗಿಡ ಗಂಟೆ ಬೆಳೆದು ಅನಾರೋಗ್ಯ ವಾತವರಣ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಅವರು ಆತಂಕ ವ್ಯಕ್ತ ಪಡಿಸಿದ್ದಾರೆ.

ಖಾಲಿ ನಿವೇಶನಗಳ ಮಾಲೀಕರು ಬೇರೆ ಬೇರೆ ಸ್ಥಳಗಳಲ್ಲಿರುವುದರಿಂದ ಅವರಿಗೆ ನೇರವಗಿ ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನೂ ಕೆಲವು ಆಸ್ತಿ ಮಾಲೀಕರ ವಿಳಾಸ ಲಭ್ಯವಾಗುತ್ತಿಲ್ಲ. ಪ್ರಯುಕ್ತ ಪತ್ರಿಕೆ ಮೂಲಕ ಸೂಚನೆ ನೀಡಿದ್ದು ಕೂಡಲೇ  ಆಸ್ತಿ ಮಾಲೀಕರು ತಮ್ಮ ನಿವೇಶನಗಳಲ್ಲಿನ ಗಿಡ ಗಂಟೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛಗೊಳಿಸಿಕೊಳ್ಳತಕ್ಕದ್ದು ಹಾಗೂ ಕಾಂಪೌಂಡ್ ನಿರ್ಮಿಸಿಕೊಳ್ಳಬೇಕು.

ಮತ್ತು ನಿಮ್ಮ ನಿವೇಶನ ಮುಂಭಾಗ ಮಾಲೀಕರ ಹೆಸರು, ವಿಳಾಸ, ಖಾತೆ, ಅಥವಾ ಅಸೆಸ್ ಮೆಂಟ್ ಸಂಖ್ಯೆ, ಪಿ.ಐ.ಡಿ. ನಂ ಹಾಗೂ ಮೊಬೈಲ್ ನಂಬರ್ ವಿರುವ ನಾಮಫಲಕ ಅಳವಡಿಸಬೇಕು, ಈ ನಿಟ್ಟಿನಲ್ಲಿ ಕ್ರಮವಹಿಸದಿದ್ದರೆ ನಿಯಾಮಾನುಸಾರ ಕರ್ನಾಟಕ ಪುರಸಭೆ ಕಾಯ್ದೆ 1964 ರಂತೆ ನಗರಸಭೆಯಿಂದ ಸ್ವಚ್ಛಗೊಳಿಸಿ ದುಪ್ಪಟ್ಟು ವೆಚ್ಚವನ್ನು ದಂಡವನ್ನಾಗಿ ವಸೂಲಿ ಮಾಡಲಾಗುವುದೆಂದು ನಗರಸಭೆ ಪೌರಾಯುಕ್ತ ಎ ವಾಸೀಂ ಅವರು ಎಚ್ಚರಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ