Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿಧಾನಸೌಧದಲ್ಲಿ ಸನ್ಮಾನ, ಕ್ರೀಡಾಂಗಣದಲ್ಲಿ ಪರೇಡ್-ಪರಮೇಶ್ವರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್‌ಸಿಬಿ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದೆ. ವಿಕ್ಟರಿ ಪರೇಡ್ ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಆ ಮೂಲಕ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆ ಆಗಿದೆ. ಆರ್​ಸಿಬಿ ತಂಡ ನೇರವಾಗಿ ವಿಧಾನಸೌಧದಿಂದ ಬಸ್​ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದು
, ಸಂಜೆ 6 ಗಂಟೆಗೆ ಆಟಗಾರರಿಂದ  ಮೈದಾನದಲ್ಲಿ ಪರೇಡ್​ ನಡೆಯಲಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಆರ್​ಸಿಬಿ ತಂಡದಿಂದ ವಿಜಯಯಾತ್ರೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಹೇಳಿದರು.
ಆರ್​ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.


ಸಿದ್ದರಾಮಯ್ಯ ಖಡಕ್ ಸೂಚನೆ-ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ ಮತ್ತು ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ M.N.ಅನುಚೇತ್​​ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ
, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ಸಿಎಂ ತಿಳಿಸಿದರು.

ಅಭಿಮಾನಿಗಳೆಲ್ಲ ಚಿನ್ನಸ್ವಾಮಿ ಸ್ಟೇಡಿಯಂಗೆ ಬನ್ನಿ ಎಂದ ಡಿಕೆಶಿ-ರಾಮನಗರ ಜಿಲ್ಲೆಯ ಕನಕಪುರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, RCB ಆಟಗಾರರಿಗೆ ವಿಧಾನಸೌಧದ ಮುಂದೆ ಸನ್ಮಾನ ಮಾಡುತ್ತೇವೆ. ತೆರೆದ ವಾಹನದಲ್ಲಿ ಆಟಗಾರರು ತೆರಳಿದರೆ ತೊಂದರೆ ಆಗುತ್ತದೆ. ಹಾಗಾಗಿ ತೆರೆದ ವಾಹನದಲ್ಲಿ ತೆರಳುವುದು ಬೇಡ ಎಂದಿದ್ದೇವೆ. ಅಭಿಮಾನಿಗಳೆಲ್ಲ ಚಿನ್ನಸ್ವಾಮಿ ಸ್ಟೇಡಿಯಂಗೆ ಬನ್ನಿ. ಅಭಿಮಾನ ತಪ್ಪು ಎನ್ನಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.
ಶಾಲಾ-ಕಾಲೇಜಿಗೆ ರಜೆ-


ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹೇಳಿಕೆ ನೀಡಿ, ವಿಧಾನಸೌಧದ ಮುಂದೆ RCB ಟೀಂಗೆ ಸರ್ಕಾರದಿಂದ ಸನ್ಮಾನ, ಪ್ರೋತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚಿಸಲಾಗಿದೆ ಎಂದರು.

ಬೆಳಗ್ಗೆ 11 ಗಂಟೆಗೆ ಅಹಮದಾಬಾದ್​ನಿಂದ ಹೊರಟಿರುವ ಆರ್​ಸಿಬಿ ತಂಡ ಟ್ರೋಫಿ ಸಮೇತ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದೆ. ವಿಶೇಷ ವಿಮಾನದಲ್ಲಿ HAL ಏರ್​ಪೋರ್ಟ್​ಗೆ ಆಗಮಿಸುವ ಆಟಗಾರರು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ನಡೆಯಲಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು