Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಗುಜರಾತ್ ಮಾದರಿಯಲ್ಲಿ ನುಸುಳುಕೋರರನ್ನು ಹೊರ ಹಾಕುತ್ತೇವೆ-ಪರಮೇಶ್ವರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ನುಸುಳುಕೋರರನ್ನು ಗುಜರಾತ್ ಮಾದರಿಯಲ್ಲಿ ವಾಪಸ್​ ಕಳಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರಮ ನುಸುಳುಕೋರರ ಗಡಿಪಾರು ಮಾಡುವ ಪ್ರಕ್ರಿಯೆ ನಡೆದಿದೆ. ಈಗಾಗಲೇ 200ಕ್ಕೂ ಹೆಚ್ಚು ಮಂದಿ ಅನಧಿಕೃತವಾಗಿ ತಂಗಿರುವುದು ಪತ್ತೆ ಮಾಡಲಾಗಿದೆ. ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಗಡಿಪಾರು ಮಾಡುತ್ತಿದ್ದೇವೆ. ನಮ್ಮಲ್ಲೂ ಹೆಚ್ಚು ನುಸುಳುಕೋರರು ಇದ್ದರೆ ವಾಪಸ್​ ಅವರ ದೇಶಕ್ಕೆ ಕಳುಹಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

ಪೊಲೀಸರು ನುಸುಳುಕೋರರ ಬಗ್ಗೆ ನಿತ್ಯ ಪರಿಶೀಲನೆ ನಡೆಸಿದ್ದಾರೆ.‌ ಗಮನಕ್ಕೆ ಬಂದಿರುವ ಎಲ್ಲರನ್ನೂ ಗಡಿಪಾರು ಮಾಡುತ್ತೇವೆ. ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅಕ್ರಮ ವಲಸಿಗರಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅಕ್ರಮವಾಗಿ ಇದ್ದಾರೆ ಅಂದ್ರೆ ಗಡಿಪಾರು ಮಾಡ್ತೇವೆ. ಈ ವಿಚಾರದಲ್ಲಿ ಕಾಂಗ್ರೆಸ್ ಸಾಫ್ಟ್ ಆಗಿದೆ ಅನ್ನೋದು ಸುಳ್ಳು. ಬಾಂಗ್ಲಾ ನುಸುಳುಕೋರರನ್ನು ತಂದು ವೋಟ್ ಹಾಕಿಸಿಕೊಳ್ಳುವಷ್ಟು ಪರಿಸ್ಥಿತಿ ನಮಗೆ ಬಂದಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಗುಜರಾತ್​ನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ಪತ್ತೆ ಮಾಡಿ ಕಳೆದ ಏಪ್ರಿಲ್​ ತಿಂಗಳಿನಲ್ಲಿ ಭಾರತದಿಂದ ಹೊರ ಕಳುಹಿಸುವ ಬೃಹತ್​ ಕಾರ್ಯಾಚರಣೆಯನ್ನು ಅಲ್ಲಿ ಪೊಲೀಸರು ಮಾಡಿದ್ದರು. ಈ ನಿಟ್ಟಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದಿದ್ದರು ಎಂದು ಸಚಿವರು ತಿಳಿಸಿದರು.

ನಕಲಿ ದಾಖಲಾತಿ ಸೃಷ್ಟಿಸಿ, ಅಕ್ರಮವಾಗಿ ಬಾಂಗ್ಲಾದೇಶಿಗರಿಗೆ ನೆರವಾಗುತ್ತಿರುವ ಜಾಲತಾಣಗಳ ಕುರಿತು ತನಿಖೆ ನಡೆಸಲಾಗಿತ್ತು. ಅಲ್ಲಿನ ಸಿಎಂ ಭೂಪೇಂದ್ರ ಪಟೇಲ್​ ಮತ್ತು ಗೃಹ ಸಚಿವ ಹರ್ಷ ಸಂಘ್ವಿ ಸೂಚನೆಯಂತೆ ಈ ಕಾರ್ಯಾಚರಣೆಯನ್ನು ನಡೆಸಿದ್ದರು ಎಂದು ಪರಮೇಶ್ವರ್ ಹೇಳಿದರು.

ಸೋಲದೇವನಹಳ್ಳಿ ಯುವಕರಿಂದ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಕೇಸ್​ನ ಪೂರ್ಣ ಮಾಹಿತಿ ಪಡೆದು ನಂತರ ಮಾಧ್ಯಮಗಳಿಗೆ ತಿಳಿಸುತ್ತೇನೆ. ರೇಣುಕಾಸ್ವಾಮಿ ಪ್ರಕರಣ ಯುವಕರಿಗೆ ಪ್ರೇರಣೆ ಆಗ್ತಿದ್ಯಾ ಗೊತ್ತಿಲ್ಲ. ಅದರ ಬಗ್ಗೆ ಸೈಕಾಲಜಿಸ್ಟ್‌ಗಳು ಹೇಳಬೇಕು. ಸೋಷಿಯಾಲಿಜಿಸ್ಟ್‌ಗಳು ಅಧ್ಯಯನ ನಡೆಸಬೇಕು ಎಂದು ಸಚಿವ ಪರಮೇಶ್ವರ್ ಹೇಳಿದರು.

ಶ್ರೀ ರಂಭಾಪುರಿ ಮಠದ ಸ್ವಾಮೀಜಿಗಳು ಡಿಕೆಶಿಗೆ ಅವಕಾಶ ಕೊಡಬೇಕೆಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ರಂಭಾಪುರಿ ಶ್ರೀಗಳು ಅವರ ಅಭಿಪ್ರಾಯ ಹೇಳಿದ್ದಾರೆ. ರಂಭಾಪುರಿ ಶ್ರೀಗಳ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಸಚಿವ ಪರಮೇಶ್ವರ್​ ಪ್ರಶ್ನಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ