Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ತಾಳಿ ಕಟ್ಟುವ ವೇಳೆ ಕೈಚಳಕ ತೋರುತ್ತಿದ್ದ ಕಳ್ಳನ ಬಂಧಿಸಿದ ಪೊಲೀಸರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಮಂಟಪ, ಕನ್ವೆನ್ಷನ್ ಹಾಲ್ ಗಳಲ್ಲಿ ಮದುವೆಗಳ ಸಂದರ್ಭದಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.


ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಪರಮೇಶ್ ಬಂಧಿತ ಆರೋಪಿ. ಆತನಿಂದ 400 ಗ್ರಾಂ ಚಿನ್ನಾಭರಣ, 91 ಸಾವಿರ ನಗದು ಸಹಿತ ಒಟ್ಟು 36.91 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳ್ಳನ ಕೈಚಳಕ:
ಮದುವೆ ಸಮಾರಂಭಗಳಿಗೆ ಅತಿಥಿಯ ಸೋಗಿನಲ್ಲಿ ತೆರಳುತ್ತಿದ್ದ ಆರೋಪಿ ಮಾಂಗಲ್ಯಧಾರಣೆ ಸಂದರ್ಭದಲ್ಲಿ ವಧು
, ವರನ ಕಡೆಯವರ ರೂಮ್‌ಗೆ ಹೋಗಿ ಚಿನ್ನಾಭರಣ, ನಗದು ದೋಚಿಕೊಂಡು ಪರಾರಿಯಾಗುತ್ತಿದ್ದ. ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿ ಮೋಜು ಮಸ್ತಿಯಲ್ಲಿ ತೊಡಗುತ್ತಿದ್ದ‌‌. ಇದೇ ರೀತಿ ಮಾಗಡಿ ರೋಡ್, ಬಸವನಗುಡಿ, ಕಾಮಾಕ್ಷಿಪಾಳ್ಯ, ಕೆಂಗೇರಿ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಎಸಗಿದ್ದನು.


ಇದಲ್ಲದೆ ಕಳೆದ ಮೇ ತಿಂಗಳಿನಲ್ಲಿ ಇದೇ ರೀತಿ ಮಾಗಡಿ ರಸ್ತೆಯ ಇಂಡಸ್ಟ್ರಿಯಲ್ ಟೌನ್‌ನಲ್ಲಿರುವ ಕಮ್ಯುನಿಟಿ ಸೆಂಟರ್‌ನ ರೂಮ್‌ಗೆ ನುಗ್ಗಿದ್ದ ಆರೋಪಿ, 31 ಸಾವಿರ ರೂಪಾಯಿ ನಗದನ್ನು ಕದ್ದು ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.


ಮಾಗಡಿ ರೋಡ್ ಠಾಣೆಯ ಇನ್ಸ್‌ಪೆಕ್ಟರ್ ರಾಜು ಜಿ‌.ಪಿ ಅವರ ನೇತೃತ್ವದ ತಂಡ ಪ್ರಕರಣದ ತನಿಖೆ ಕೈಗೊಂಡು ಗುಬ್ಬಿ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ. 8 ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿರುವುದು ಬೆಳಕಿಗೆ ಬಂದಿವೆ. ಸದ್ಯ ಆರೋಪಿ ಕಳ್ಳ ಪರಮೇಶ್ ನಿಂದ 36.91 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು