Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಪ್ರಧಾನಿ ಮೋದಿ ನಾಯಕತ್ವ ಒಪ್ಪಿ ಅಪ್ಪಿ ಗೆಲ್ಲಿಸಿದ ದೆಹಲಿ ಮತದಾರರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಭಾರತೀಯ ಜನತಾ ಪಾರ್ಟಿಯ ಪ್ರತಿ ಹೆಜ್ಜೆಯೂ ಗೆಲುವಿನ ಮೆಟ್ಟಿಲು, ಅಭಿವೃದ್ಧಿಯ ತೊಟ್ಟಿಲು" ಎಂಬುದನ್ನು ದೆಹಲಿಯ ದಿಗ್ವಿಜಯ ಸಾಕ್ಷಿಕರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿ ಅಪ್ಪಿ ದೆಹಲಿ ಮತದಾರರು ಭಾರತೀಯ ಜನತಾ ಪಾರ್ಟಿಗೆ ದಿಗ್ವಿಜಯದ ಕಿರೀಟ ತೊಡಿಸಿದ ವಿಜಯೋತ್ಸವದ ಸಂಭ್ರಮವನ್ನು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಸಡಗರ ಸಂಭ್ರಮಗಳಿಂದ ಕಾರ್ಯಕರ್ತರೊಡಗೂಡಿ ಸಂಭ್ರಮಿಸಲಾಯಿತು ಎಂದು ಅವರು ತಿಳಿಸಿದ್ದಾರೆ.


ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮೋದಿ ಅವರನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವರಾದ ಅಮಿತ್ ಶಾ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.

ಭಾರತೀಯ ಜನತಾ ಪಾರ್ಟಿ ದೇಶಭಕ್ತಿ ಹಾಗೂ ರಾಷ್ಟ್ರ ಕಟ್ಟುವ ಲಕ್ಷಾಂತರ ಕಾರ್ಯಕರ್ತರನ್ನೊಳಗೊಂಡ ವಿಶ್ವ ದಾಖಲೆ ನಿರ್ಮಿಸಿರುವ ರಾಜಕೀಯ ಪಕ್ಷವಾಗಿದೆ. ಬಿಜೆಪಿಯ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ. ಭವಿಷ್ಯತ್ತಿನಲ್ಲಿ ಇದು ಕರ್ನಾಟಕದಲ್ಲೂ ಪ್ರತಿಫಲಿಸಲಿದೆ.

ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಮಾರ್ಗದರ್ಶನದಲ್ಲಿ ನೂತನ ಸರಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಕರ್ತರು ಹಾಗೂ ದೆಹಲಿಯ ಜನತೆಯ ಚಾರಿತ್ರಿಕ ಜಯವಾಗಿದೆ ಎಂದು ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಸಿ.ಟಿ ರವಿ, ಶಾಸಕ ಮುನಿರತ್ನ, ಸಂಸದರಾದ ಪಿ.ಸಿ ಮೋಹನ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಶಾಸಕರು, ಪರಿಷತ್‌ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು