E-PAPER
24 Nov 2026, 03:40:11 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ವೈದ್ಯಕೀಯ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಪ್ರೊಫೆಸರ್

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮೆಡಿಕಲ್ ಕಾಲೇಜ್ ಪ್ರೊ. ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವ ಘಟನೆ ಚಿಕ್ಕಮಗಳೂರು ಮೆಡಿಕಲ್ ಅನಾಟಮಿ ಕಾಲೇಜಿನಲ್ಲಿ ಜರುಗಿದೆ.
ಮೂರನೇ ಸೆಮಿಸ್ಟರ್​ನ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್​ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಆರೋಪಿ ಪ್ರೊ.ಗಂಗಾಧರ್ ಕಳುಹಿಸುತ್ತಿದ್ದಲ್ಲದೆ
ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.


ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಹರೀಶ್ ಈ ಸಂಬಂಧ ಪ್ರೊ.ಗಂಗಾಧರ್​ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಕಳೆದ
2023 ರಿಂದ ಗಂಗಾಧರ್​ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬೆಂಗಳೂರು ಮೂಲದ ವಿದ್ಯಾರ್ಥಿನಿ ಆರೋಪಿಸಿದ್ದರು. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನೋಟಿಸ್​ನಲ್ಲೇನಿದೆ?
ಸಂತ್ರಸ್ತೆಯು ಇನ್​ಸ್ಟಾಗ್ರಾಂ ಹಾಗೂ ಯೂಟ್ಯೂಬ್​ನಲ್ಲಿ ನೀಡಿರುವ ಸಂದರ್ಶನದಲ್ಲಿ
, ಡಾ.ಗಂಗಾಧರ ಅವರು ವಾಟ್ಸ್​​ಆ್ಯಪ್ ಚಾಟ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಬಗ್ಗೆ ಆರೋಪಿಸಿರುತ್ತಾರೆ.


ಈ ಕುರಿತು ಲಿಖಿತ ಸಮಜಾಯಿಷಿ ನೀಡಬಬೇಕು ಎಂದು ಶೋಕಾಸ್ ನೋಟಿಸ್​​ನಲ್ಲಿ ಸೂಚನೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಂ ಹಾಗೂ ಯೂಟ್ಯೂಬ್​ನಲ್ಲಿ ಸಂತ್ರಸ್ತೆಯು ನೀಡಿರುವ ಸಂದರ್ಶನದಲ್ಲಿ ನೀವು ವಿದ್ಯಾರ್ಥಿನಿಯೊಡನೆ ವಾಟ್ಸ್​​ಆ್ಯಪ್ ಚಾಟ್ ನಡೆಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ದಿನಾಂಕ
23-11-2025 ರಿಂದ ಹರಿದಾಡುತ್ತಿರುತ್ತದೆ.


ಈ ವಾಟ್ಸ್​​ಆ್ಯಪ್ ಚಾಟ್ ಕುರಿತಂತೆ ತಮ್ಮ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಈ ನೋಟೀಸ್ ತಲುಪಿದ ಕೂಡಲೇ ಲಿಖಿತ ಸಮಜಾಯಿಷಿ ನೀಡಲು ಸೂಚಿಸಿದೆ. ತಪ್ಪಿದ್ದಲ್ಲಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಗಂಗಾಧರ್ ಅವರಿಗೆ ನೀಡಿದ ನೋಟಿಸ್​​ನಲ್ಲಿ ಡೀನ್ ಉಲ್ಲೇಖಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು