ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಟ ಚೇತನ್ ಅಹಿಂಸಾ ಅವರು ಡಾ. ರಾಜ್ ಕುಮಾರ್ ಅವರ ಸಮಾಧಿ ಸ್ಥಳದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಪೋಸ್ಟ್ ದೊಡ್ಡ ವಿವಾದವನ್ನು ಸೃಷ್ಟಿಸಿದ್ದು, ಇದಕ್ಕೆ ದೊಡ್ಡಬಳ್ಳಾಪುರದ ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ ಕಾರಣವಾಗಿದೆ.
ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಕರ್ನಾಟಕ ಸರ್ಕಾರ 2.5 ಎಕರೆ ಜಾಗ ನೀಡಿದ್ದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವ ನಟ ಚೇತನ್ ಅಹಿಂಸಾ ವಿರುದ್ಧ ಡಾ.ರಾಜ್ ಕುಮಾರ್ ಅಭಿಮಾನಿಗಳು, ಕನ್ನಡ ಪರ ಸಂಘಟನೆಗಳು ಡಾ. ರಾಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ದೊಡ್ಡಬಳ್ಳಾಪುರ ನಗರ ಪೊಲಿಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಅವರಿಗೆ ಚೇತನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ನೀಡಲಾಯಿತು.
2.5 ಎಕರೆ ಜಾಗ ನೀಡಿದ್ದು ತಿಳುವಳಿಕೆಯ ನಿರ್ಧಾರವಾಗಿತ್ತಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಸಾರ್ವಜನಿಕರ ಉಪಯೋಗಕ್ಕೆ ಭೂಮಿ ಹಂಚಬೇಕು ಮತಗಳ ಉದ್ದೇಶದಿಂದ ಹಂಚ ಬಾರದು ಎಂದು ಪೋಸ್ಟ್ ಹಾಕಿದ್ದರು.
ಪ್ರತಿಭಟನೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು. ನರಸಿಂಹಮೂರ್ತಿ, ಕನ್ನಡಪರ ಸಂಘಟನೆಗಳ ಮುಖಂಡರಾದ ನಗರಸಭಾ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ, ಕನ್ನಡ ಪಕ್ಷದ ಮುಖಂಡ ಸಂಜೀವನಾಯಕ್,ಕರವೇ ಪ್ರದಾನ ಕಾರ್ಯದರ್ಶಿ ರಾಜಘಟ್ಟ ರವಿ, ಡಿ.ಪಿ. ಆಂಜನೇಯ, ಕನ್ನಡ ಸಾಹಿತ್ಯ ಪರಿಷತ್ತಿನ ನಿಟಪೂರ್ವ ಅಧ್ಯಕ್ಷೆ ಪ್ರಮಿಳಾ ಮಹದೇವ್, ಪರಮೇಶ್, ಚೌಡರಾಜ್, ರಮೇಶ್, ಜನಪರ ಮಂಜು, ಗುರು, ನವೀನ್, ಸೂರಿ, ಮಂಜು, ಮನು, ನಾಗಣ್ಣ ಮಂಜುನಾಥ. ಸಂಜೀವ. ಕನ್ನಡ ಪರ ಸಂಘಟನೆ ಮುಖಂಡರು ಹಾಜರಿದ್ದರು.


