Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತತೆಗೆ ಮನ್ನಣೆ ನೀಡಿದ್ದ ಪೂಜ್ಯಶ್ರೀಗಳು- ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ರಾಯಚೂರು :
ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು
, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ-
ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ  ಕಾಗಿನೆಲೆ ಗುರುಪೀಠ1992 ರಲ್ಲಿ ಸ್ಥಾಪಿತವಾಗಿ
, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು , ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು.

ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ.ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.



ಮನುಜರೆಲ್ಲರೂ ಒಂದೇ ಕುಟುಂಬ-
ಕನಕದಾಸರು
ಕುಲಕುಲವೆಂದು ಹೊಡೆದಾಡದಿರಿಎಂದಂತೆ ಬುದ್ಧಬಸವಾದಿಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ ಧರ್ಮ ವರ್ಗ ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು.

ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ.   ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ. ಯಾವುದೇ ಧರ್ಮವೂ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು. ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬನ್ನಿ-ಸಮಾಜಕ್ಕೆ ಸಿಎಂ ಕರೆ
ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ.


ಸ್ವಾಭೀಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಯುವಪೀಳಿಗೆ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು ಎಂದರು.

ಜನರ ಪ್ರೀತಿಯಿಂದ ರಾಜಕೀಯದಲ್ಲಿ ಬದುಕಿದ್ದೇನೆ-
ಜನರ ಆರ್ಶೀವಾದದಿಂದ 8 ಬಾರಿ ಗೆದ್ದು
, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ.  ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಕೆಲಸ ಎಂದು ತಿಳಿಸಿದರು.

ಕುರುಬ ಸಮಾಜ ಎಸ್ ಟಿ ಸೇರಿಸಲು ಶಿಫಾರಸ್ಸು-
ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ.  ವಿದ್ಯಾರ್ಥಿ
, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿಗೆ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು