Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಅಗತ್ಯ ಇರುವ ಎಲ್ಲರಿಗೂ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ-ಪಪ್ಪಿ ಭರವಸೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ಉಚಿತವಾಗಿ ಊಟ, ವಸತಿಯೊಂದಿಗೆ ಶಸ್ತ್ರ ಚಿಕಿತ್ಸೆ ಹಾಗೂ ಔಷಧ ಮತ್ತು ಕನ್ನಡಕ ವಿತರಣೆ ಮಾಡುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ಹಾಗೂ ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಲಕ್ಷ್ಮಿಸಾಗರ ಗ್ರಾಮದಲ್ಲಿ ಆಯೋಜಿಸಲಾಗದ್ದ ಬೃಹತ್ ಉಚಿತ ಕಣ್ಣಿನ ತಪಾಸಣೆ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಉದ್ಘಾಟಿಸಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿದರು.

ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಶಾಸಕರ ಕಾರ್ಯಾಲಯದಿಂದ ವ್ಯವಸ್ಥೆ ಮಾಡಲಾಗುವುದು. ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಮಾತನಾಡಿ, ಕಣ್ಣು ಮಹತ್ವದ ಅಂಗವಾಗಿದ್ದು ಇದನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ. 40 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ವರ್ಷಕ್ಕೊಮ್ಮೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣನ್ನು ರಕ್ಷಿಸಿಕೊಳ್ಳಿರಿ ಎಂದರು.

ಚಲನಚಿತ್ರ ನಟ ದೊಡ್ಡಣ್ಣ ಮಾತನಾಡಿ ಪಂಚೇಂದ್ರಿಯಗಳಲ್ಲಿ ಪವಿತ್ರವಾದ ಅಂಗ ನಯನವಾಗಿದೆ. ನಯನಗಳ ಬಗ್ಗೆ ಎಲ್ಲರಲ್ಲೂ ಕಾಳಜಿ ಇರಬೇಕು. ಸಂಘ ಸಂಸ್ಥೆಗಳ ಮೂಲಕ ಕಾಲ ಕಾಲಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಪ್ರಯತ್ನವಾಗಬೇಕು ಎಂದರು.

ಶಿಬಿರದಲ್ಲಿ 280 ಜನರ ಕಣ್ಣಿನ ತಪಾಸಣೆ ಮಾಡಿಸಲಾಯಿತು. 51 ಕಣ್ಣಿನಪೊರೆ ಇರುವರನ್ನು ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಇವರಗೆ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ಮಾಡಲು ನೊಂದಣಿ ಮಾಡಿಕೊಳ್ಳಲಾಯಿತು. 98 ದೃಷ್ಟಿ ದೋಷ ಇರುವವರನ್ನು ಗುರುತಿಸಲಾಗಿದ್ದು ಉಚಿತ ಕನ್ನಡಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಸ್ವಾಮಿ. ಉಪಾಧ್ಯಕ್ಷೆ ಸುನಿತಾ, ಸದಸ್ಯರಾದ ವಸಂತ, .ಬಿ.ಧನಂಜಯ, ಅಶೋಕ್ಕುಮಾರ್, ಸುರೇಶ್, ದೇವರಾಜ್, ಕವಿತಾ, ಅಲಿಖಾನ್, ತಾ.ಪಂ.ಇಓ ರವಿಕುಮಾರ್, ಆರೋಗ್ಯ ಅಧಿಕಾರಿ ಡಾ ಬಿ.ವಿ.ಗಿರೀಶ್, ಶಂಕರ್ ಕಣ್ಣಿನ ಆಸ್ಪತ್ರೆ ವೈದ್ಯರ ತಂಡ ಸೇರಿದಂತೆ ಮತ್ತಿರರು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ