Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭೀಮಣ್ಣ ಖಂಡ್ರೆ ಪ್ರಶಸ್ತಿಗೆ ರಾಮು ಪಾಟೀಲ ಆಯ್ಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾತಂತ್ರ ಹೋರಾಟಗಾರ, ಶತಾಯುಷಿ, ಮಾಜಿ ಸಚಿವ ಮತ್ತು ಲೋಕನಾಯಕರಾದ ದಿ.ಭೀಮಣ್ಣ ಖಂಡ್ರೆ ಅವರ ಹೆಸರಿನಲ್ಲಿ ಅವರ ಸುಪುತ್ರರಾದ ಈಶ್ವರ ಬಿ ಖಂಡ್ರೆ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ 3 ಲಕ್ಷ ರೂ ದತ್ತಿ ನಿಧಿ ಸ್ಥಾಪನೆ ಮಾಡಿದ್ದು, ಮೊದಲ ಪ್ರಶಸ್ತಿಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಸಹಾಯಕ ಸ್ಥಾನಿಕ ಸಂಪಾದಕರಾದ ರಾಮು ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಲಬುರ್ಗಿ ಜಿಲ್ಲೆ ಸೇಡಂನವರಾದ ರಾಮು ಪಾಟೀಲ್ ಅವರು 1997ರಲ್ಲಿ ಪತ್ರಿಕೋದ್ಯಮ ಪ್ರವೇಶ ಮಾಡಿದರು. ವೀಕ್ ಪತ್ರಿಕೆ, ಮಸ್ಕತ್ ಡೈಲಿಯಲ್ಲಿ ಸೇವೆ ಸಲ್ಲಿಸಿ ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಮುಖ್ಯ ವರದಿಗಾರರಾಗಿ ಸೇರ್ಪಡೆಗೊಂಡರು. ಸತತ 25 ವರ್ಷಗಳ ವೃತ್ತಿ ಸೇವೆ ಮಾಡಿರುವ ಅವರು ಈಗಲೂ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಸಹಾಯಕ ಸ್ಥಾನಿಕ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಲಿಂಗಸುಗೂರು ಸಿದ್ರಾಮಪ್ಪ ಪ್ರಶಸ್ತಿ:
ಲಿಂಗಸುಗೂರು ಸಿದ್ರಾಮಪ್ಪ ಹೆಸರಿನಲ್ಲಿ ಹೊಸದಾಗಿ ಅವರು ಪುತ್ರ ಶಿವರಾಜ ಕೆಂಭಾವಿ ಅವರು ಸ್ಥಾಪನೆ ಮಾಡಿರುವ ಪ್ರಶಸ್ತಿಗೆ ಹಾಸನ ಜಿಲ್ಲೆ ಹಾಸನವಾಣಿ ಪತ್ರಿಕೆ ಬೇಲೂರು ತಾಲೂಕು ವರದಿಗಾರರಾದ ಭಾರತಿಗೌಡ ಮತ್ತು ವಿಜಯಪುರ ಜಿಲ್ಲೆ ಸುವರ್ಣ ನ್ಯೂಸ್ ಟಿವಿ ಜಿಲ್ಲಾ ವರದಿಗಾರರಾದ ಷಡಾಕ್ಷರಿ ಬಸವರಾಜು ಕಂಪೂನವರ (ಷಡಾಕ್ಷರಿ ಬಿ ಕಂಪೂನವರ) ಅವರು ಆಯ್ಕೆಯಾಗಿದ್ದಾರೆ

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು