E-PAPER
23 Nov 2026, 11:31:46 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಆರ್​ಸಿಬಿ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊನೆಗೂ ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ ಆರ್​ಸಿಬಿ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ದೊರೆಯಿತು. ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಹೆಚ್​ಎಎಲ್​ಗೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.

ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಬರಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ನಂತರ ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಯಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಿತು. ನಂತರ ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಅಹಮದಾಬಾದ್​​ನಿಂದ ಬೆಂಗಳೂರಿಗೆ ಬರುವ ಆರ್​ಸಿಬಿ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆದೊಯ್ಯಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಭದ್ರತೆಯ ದೃಷ್ಟಿಯಿಂದ ಅದಕ್ಕೆ ಅವಕಾಶ ನೀಡಲಿಲ್ಲ.

ಮೊದಲಿಗೆ, ಆರ್​ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್​​​ನಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ವೇಳೆ, ತಂಡದ ಪರವಾಗಿ ಒಬ್ಬರು ಆಟಗಾರರು ಮಾತನಾಡಿದರು. ನಂತರ ಎಲ್ಲಾ ಆಟಗಾರರು ಬಸ್​​ನಲ್ಲಿ ಸ್ಟೇಡಿಯಂಗೆ ತೆರಳಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!