Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ
, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲೊಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ. ರಾಜ್ಯದಲ್ಲಿ ಸಹಕಾರಿ ಚಳವಳಿ 1904 ರಲ್ಲೇ ಅಂದರೆ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು.

1905 ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪ್ರೋತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ನೆರವಾಯಿತು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ / ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಅವರು ತಿಳಿಸಿದರು.

ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ.

ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದು ತಿಳಿಸಿದರು.

ಪಂಚಾಯ್ತಿ, ಸೊಸೈಟಿ, ಶಾಲೆ ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು‌.

ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದರು.

ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ ಮಾಡಿದೆ ಎಂದು ಸಿಎಂ ಹೇಳಿದರು.

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು‌. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ.

ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು  ಪ್ರತಿಯೊಬ್ಬರು ಪ್ರತಿಭಟಿಸಬೇಕು.

2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು.



ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು