ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಕುವೆಂಪು ನಗರದ ನಿವಾಸಿ ಹಾಗೂ ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎಚ್.ಎಂ. ಕೆಂಚಪ್ಪ(69) ಅವರು ಭಾನುವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದ ಇವರ ಅಗಲಿಕೆಗೆ ಹಿರಿಯೂರಿನ ಶೈಕ್ಷಣಿಕ ವಲಯ ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಿರಿಯೂರು ನಗರದ ಕುವೆಂಪು ನಗರದಲ್ಲಿರುವ ಅವರ ಸ್ವಗೃಹಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಪತ್ನಿ, ಒಬ್ಬ ಮಗ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಗ್ಗೆ 11:30ಕ್ಕೆ ಪಿಟ್ಲಾಲಿ ಸ್ವಗ್ರಾಮದ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಆಪ್ತರು ಹಾಗೂ ಹಿತೈಷಿಗಳು ಪ್ರಾರ್ಥಿಸಿದ್ದಾರೆ.




