Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶ್ರೀಮಂತ ಯುವಕರೇ ಟಾರ್ಗೆಟ್; ಕಿಡ್ನಾಪ್ ಮಾಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 10 ವಿದ್ಯಾರ್ಥಿಗಳ ಗ್ಯಾಂಗ್ ಅರೆಸ್ಟ್!

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ದಾವಣಗೆರೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಟ್ಟೆ ವ್ಯಾಪಾರಿಯೊಬ್ಬರನ್ನು ಅಪಹರಿಸಿ, ಮರದ ತುಂಡು ಹಾಗೂ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಹತ್ತು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಒಟ್ಟು 10 ಜನ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಅತಿಥಿಯಾಗಿದ್ದಾರೆ.

ಪ್ರಕರಣದ ವಿವರ: ದಾವಣಗೆರೆಯ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ವ್ಯವಹಾರದ ಬಗ್ಗೆ ಮಾತನಾಡಲು ಬರುವಂತೆ ಸ್ನೇಹಿತ ಅಬ್ಬಾಸ್ ಪುಸಲಾಯಿಸಿ ಶಾಮನೂರು ಬಳಿಯ ಸಮುದಾಯ ಭವನಕ್ಕೆ ಕರೆದಿದ್ದನು. ಅಲ್ಲಿಗೆ ಕಾರಿನಲ್ಲಿ ಬಂದಿದ್ದ ನಾಲ್ವರು ಸೇರಿದಂತೆ ಇತರ ಆರೋಪಿಗಳು, ಆಂಜನೇಯ ಬಡಾವಣೆಯ ಮನೆಯೊಂದಕ್ಕೆ ಬಟ್ಟೆ ವ್ಯಾಪಾರಿಯನ್ನು ಅಪಹರಿಸಿ ಕರೆದೊಯ್ದಿದ್ದರು.

Advertisement

ಆರೋಪಿಗಳು ಬಟ್ಟೆ ವ್ಯಾಪಾರಿಯ ಮೇಲೆ ಮರದ ತುಂಡು ಮತ್ತು ಬಿಯರ್ ಬಾಟಲಿಯಿಂದ ಮನಬಂದಂತೆ ಹಲ್ಲೆ ನಡೆಸಿ, ತಂದೆಗೆ ಫೋನ್ ಮಾಡಿ 10 ಲಕ್ಷ ರೂಪಾಯಿ ಹಣ ತರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಪೊಲೀಸರ ಕಾರ್ಯಾಚರಣೆ ಮತ್ತು ಬಂಧನ: ಅಪಹರಣಕ್ಕೊಳಗಾದ ವ್ಯಾಪಾರಿ ಪ್ರತಿದಿನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಲೈವ್ ಲೊಕೇಶನ್ ಶೇರ್ ಮಾಡುತ್ತಿದ್ದರಿಂದ, ಅದೇ ಆಧಾರದ ಮೇಲೆ ಕುಟುಂಬಸ್ಥರು ಮತ್ತು ಸ್ಥಳೀಯರು ಆಂಜನೇಯ ಬಡಾವಣೆ ಬಳಿ ಹುಡುಕಾಟ ನಡೆಸಿದ್ದಾರೆ. ಜನ ಸೇರುತ್ತಿರುವುದನ್ನು ಕಂಡು ಹೆದರಿದ ಖದೀಮರು ವ್ಯಾಪಾರಿಯನ್ನು ಬಿಟ್ಟು ಪರಾರಿಯಾಗಿದ್ದರು.

ನಂತರ ಸಂತ್ರಸ್ತ ವ್ಯಾಪಾರಿ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿ ಗಂಗಾರಾಮ ಪವಾರ್ ಅಲಿಯಾಸ್ ಬಬ್ಲು ಸೇರಿದಂತೆ ಒಟ್ಟು 10 ಜನ ಖಾಸಗಿ ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಗಂಗಾರಾಮ್ ವಿರುದ್ಧ ದಾವಣಗೆರೆ ಹಾಗೂ ಇತರೆ ಜಿಲ್ಲೆಗಳಲ್ಲಿಯೂ ಅಪರಾಧ ಪ್ರಕರಣಗಳು ಇರುವುದು ತನಿಖೆಯಿಂದ ತಿಳಿದಬಂದಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ