Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ರೌಡಿ ಶೀಟರ್ ಗಳ ಪೆರೇಡ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ
 ದೊಡ್ಡಬಳ್ಳಾಪುರ ಡಿವೈಎಸ್ ಪಿ ಕಛೇರಿ ಆವರಣದಲ್ಲಿ ರೌಡಿ ಶೀಟರ್ ಗಳ ಪೆರೇಡ್ ನೆಡೆಸಲಾಯಿತು. 

248ಕ್ಕೂ ಹೆಚ್ಚು ರೌಡಿ ಶೀಟರ್ ಗಳಿಗೆ ಸಜ್ಜನರಾಗಿ ಬದುಕುವಂತೆ ಅಡಿಷನಲ್ ಎಸ್ ಪಿ ನಾಗರಾಜ್ ಎಚ್ಚರಿಕೆ ನೀಡಿದರು.
ನಗರದ ಡಿವೈಎಸ್ ಪಿ ಕಚೇರಿ ಆವರಣದಲ್ಲಿ ಎಎಸ್ ಪಿ-
2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗಕ್ಕೆ ಒಳಪಡುವ ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲ ಉಜ್ಜನಿ ಹೊಸಹಳ್ಳಿ, ವಿಜಯಪುರ, ಚನ್ನರಾಯಪಟ್ಟಣ, ವಿಶ್ವ ನಾಥಪುರರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳ ಪರೇಡ್ ಹಮ್ಮಿಕೊಳ್ಳಲಾಗಿತ್ತು.

 ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಅದರಲ್ಲೂ ರೌಡಿಶೀಟರ್ ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವುದು, ಕಾನೂನಿಗೆ ಬೆಲೆ ಕೊಡದೆ ಸಾರ್ವಜನಿಕರ ಆಸ್ತಿಗೆ ತೊಂದರೆ ಹಾಗು ಸಾರ್ವಜನಿಕರಿಗೆ ಭಯ ಪಡಿಸುವವರ ಮೇಲೆ ರೌಡಿ ಹಾಳೆಯನ್ನು ತೆರೆಯಲಾಗಿದ್ದು ಮತ್ತೆ ಯಾವುದೆ ಪ್ರಕರಣಕ್ಕೆ ಭಾಗಿಯಾಗದೆ ಸಮಾಜದಲ್ಲಿ ಎಲ್ಲರ ಜೊತೆ ಬೆರತು ಸುಧಾರಣೆ ಹೊಂದಿದ್ದಾರೆ ಎಂಬುದು ಭೌತಿಕವಾಗಿ ಅವರ ಕೆಲಸ ಕಾರ್ಯಗಳ ಬಗ್ಗೆ ನಿಗಾವಹಿಸಿ ಮತ್ತು ದಾಖಲೆಗಳನ್ನು ಪರಿಶೀಲಿಸಿದಾಗ ಪರಿವರ್ತನೆ ಹೂಂದಿದ್ದಾರೆ ಎಂಬುದು ಕಂಡು ಬಂದರೆ ಅಂತಹವರ ರೌಡಿ ಹಾಳೆಯಿಂದ ತೆಗೆಯಬೇಕು ಎಂದಾಗ ಮೇಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರಿಗೆ   ರೌಡಿ ಹಾಳೆಯಿಂದ ತೆಗೆಯಲಾಗುವುದು ಎಂದರು.

ರೌಡಿ ಪರೇಡ್‌ನಡೆಸಿ ಮಾಧ್ಯಮದವರೊಂದಿಗೆ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಮಾತನಾಡಿ, ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದಲ್ಲಿ ಸುಮಾರು 248 ರೌಡಿಶೀಟರ್ ಗಳು ಇದ್ದಾರೆ. ಅದರಲ್ಲಿ ಇಂದು ನಡೆದ ರೌಡಿ ಪರೇಡ್ ನಲ್ಲಿ 118 ಮಂದಿ ಹಾಜರಾಗಿದ್ದರು. ಇನ್ನು ಕೆಲವರು ಗೈರಾಗಿದ್ದಾರೆ. ಹಲವರಿಗೆ ಅನಾರೋಗ್ಯ ಕಾರಣದಿಂದ ಬಂದಿಲ್ಲ. ಮತ್ತೆ ಕೆಲವರು ಜೈಲಿನಲ್ಲಿದ್ದಾರೆ. ಇದರಲ್ಲಿ 25 ಜನ ಕೊಲೆ ಆರೋಪಿಗಳಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಪಿ.ರವಿ ಮಾತನಾಡಿ ರೌಡಿಶೀಟರ್ ಗಳು ಹಳೆಯ ಚಾಳಿ ಮುಂದುವರಿಸಬಾರದು. ಸಮಾಜದಲ್ಲಿ ಗೌರವಯುತವಾದ ಜೀವನ ರೂಪಿಸಿಕೊಳ್ಳಬೇಕು. ಅನಗತ್ಯ ತಂಟೆಗಳಲ್ಲಿ ಮೂಗ ತೂರಿಸಿದರೆ ಹುಷಾರ್, ಶಿಕ್ಷೆ ಕಟ್ಟಿಟ್ಟಬುತ್ತಿ ಎಂದು ರವಿ ಎಚ್ಚರಿಸಿದರು.

ಭವಿಷ್ಯದಲ್ಲಿ ಅಪರಾಧದಲ್ಲಿ ಭಾಗಿಯಾಗದೇ ಸನ್ನಡತೆಯಿಂದ ಜೀವನ ಸಾಗಿಸುತ್ತಿರುವ ಹಾಗೂ 60 ವರ್ಷ ಮೇಲ್ಪಟ್ಟವರ ರೌಡಿಶೀಟರ್ ಗಳ ಚಲನವಲನ ಗಮನಿಸಿ ರೌಡಿ ಪಟ್ಟಿಯಿಂದ ಹೆಸರು ತೆಗೆಯಲಾಗುವುದು. ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರಿಸುವುದು ಹಾಗೂ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿದ್ದಕ್ಕೆ ರೌಡಿ ಶೀಟ‌ರ್ ಆಗಿದ್ದೀರಿ. ಅದರಿಂದ ಹೊರಬರಬೇಕೆಂದರೆ ಗೌರವಯುತ ಜೀವನ ನಡೆಸಬೇಕು. ಮತ್ತೆ ಅಂಥದ್ದೇ ಕುಮ್ಮಕ್ಕು ಮುಂದುವರಿಸಿದರೆ ಶಿಕ್ಷೆ ಗ್ಯಾರೆಂಟಿ.

ನಿರಂತರ ಹತ್ತು ವರ್ಷ ಸಮಾಜದಲ್ಲಿ ಯಾರ ನೆಮ್ಮದಿಗೂ ಧಕ್ಕೆ ತರದಂತೆ ಜೀವನ ನಡೆಸಬೇಕು. ದೂರುಗಳೂ ಬರದಂತೆ ಇರಬೇಕು. ಹಾಗೆ ಮಾಡಿದರೆ ಮಾತ್ರ ರೌಡಿ ಹಾಳೆಯಿಂದ ತೆರವು ಮಾಡುತ್ತೇವೆ ಎಂದು ಡಿವೈಎಸ್ಪಿ ರವಿ ಅವರು ಭರವಸೆ ನೀಡಿದರು.

 ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಪೋಲಿಸ್‌ಠಾಣೆ ಇನ್ಸೆಕ್ಟ‌ರ್ ಅಮರೇಶ್‌ಗೌಡ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸೆಕ್ಟ‌ರ್ ಎನ್ ಎ. ಸಾದಿಕ್ ಪಾಷಾ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸೆಕ್ಟರ್ ಕಲ್ಲಪ್ಪ ಶಂಕರಪ್ಪ ಖರಾತ್, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸೆಕ್ಟರ್ ರಾವ್ ಗಣೇಶ್ರಾಜಾನುಕುಂಟೆ ಪೋಲಿಸ್ ಠಾಣೆ ಇನ್ಸೆಕ್ಟರ್  ಕೆ ಹೆಚ್ ದಿಲೀಪ್ ಕುಮಾರ್, ವಿಜಯಪುರ, ವಿಶ್ವನಾಥಪುರ, ಚನ್ನರಾಯಪಟ್ಟಣ, ಇನ್ಸೆಕ್ಟರ್ ಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

           

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು