Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಡಾಲರ್ ಎದುರು ರೂಪಾಯಿ ತೀವ್ರ ಕುಸಿತ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರೂಪಾಯಿಯ ದುರ್ಬಲ ಸಾಧನೆ ಮುಂದುವರಿದಿದೆ.
ಒಂದು ಡಾಲರ್​ಗೆ ರೂಪಾಯಿ ಮೌಲ್ಯ 94 ರೂ ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರೂಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಮಾ.23 ರಂದು ಸೋಮವಾರ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು.


ರೂಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣ?-
ಕಚ್ಛಾ ತೈಲ ಬೆಲೆಗಳು ಸತತವಾಗಿ ಹೆಚ್ಚಿನ ಮಟ್ಟದಲ್ಲಿ ಇರುವುದು ಭಾರತದ ಆಮದು ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಆಮದು ಹೆಚ್ಚಾದಾಗ ಡಾಲರ್​ಗೆ ಬೇಡಿಕೆ ಹೆಚ್ಚುತ್ತದೆ. ಪರಿಣಾಮವಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಸಹಜವಾಗಿ ಕುಂದಿದೆ.
ರೂಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕನ್ ಡಾಲರ್ ಪ್ರಬಲಗೊಂಡಿರುವುದಷ್ಟೇ ಅಲ್ಲ
, ಕೆಲ ಕಾರಣಗಳಿವೆ.

ಭಾರತೀಯ ಮಾರುಕಟ್ಟೆಗಳಿಂದ ವಿದೇಶಿ ಹಣದ ಹೊರಹರಿವು ಸತತವಾಗಿ ನಡೆಯುತ್ತಿದೆ. ಹಾಗೆಯೇ, ಬಾಂಡ್ ಯೀಲ್ಡ್​ಗಳೂ ಕೂಡ ಹೆಚ್ಚಿನ ಮಟ್ಟದಲ್ಲಿವೆ. ಈ ಅಂಶಗಳು ರೂಪಾಯಿ ಮೇಲೆ ಒತ್ತಡ ಹಾಕಿವೆ ಎಂಬುದು ಆರ್ಥಿಕ ಮತ್ತು ಮಾರುಕಟ್ಟೆ ತಜ್ಞರ ಅಭಿಪ್ರಾಯವಾಗಿದೆ.

ವಿದೇಶಿ ಪೋರ್ಟ್​ಫೋಲಿಯೋ ಹೂಡಿಕೆದಾರರು ಅಥವಾ ಎಫ್​ಪಿಐಗಳು ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದ ಷೇರುಗಳು, ಬಾಂಡ್​ಗಳು ಇತ್ಯಾದಿಯನ್ನು ಮಾರುತ್ತಿರುವುದು ಹೆಚ್ಚಾಗಿದೆ. ಹೀಗೆ ಮಾರುವಾಗ ರೂಪಾಯಿಯನ್ನು ಡಾಲರ್​ಗಳಾಗಿ ಪರಿವರ್ತಿಸುತ್ತಾರೆ. ಹೀಗಾಗಿ, ಅಮೆರಿಕನ್ ಡಾಲರ್​ಗೆ ಬೇಡಿಕೆ ಹೆಚ್ಚಿ, ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗುತ್ತದೆ. ಜಾಗತಿಕವಾಗಿ ಅನಿಶ್ಚಿತ ಪರಿಸ್ಥಿತಿ ಇದ್ದಾಗ ಹೂಡಿಕೆದಾರರು ಎಚ್ಚರಿಕೆ ವಹಿಸುತ್ತಾರೆ. ಇಂಥ ಸಂದರ್ಭಗಳಲ್ಲಿ ರೂಪಾಯಿಯಂತಹ ಕರೆನ್ಸಿಗಳ ಬದಲು ಡಾಲರ್ ಅನ್ನು ಇಟ್ಟುಕೊಳ್ಳುವುದುಂಟು. ಇದು ಡಾಲರ್​ಗಿರುವ ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು