E-PAPER
24 Nov 2026, 01:47:25 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜಾತಿಗಣತಿ ಜಟಿಲ ಸಮಸ್ಯೆ, ತೀರ್ಮಾನಿಸಲು ವರ್ಷವಾಗಬಹುದು-ಸತೀಶ್ ಜಾರಕಿಹೊಳಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಗಣತಿ ಬಹಳ ಜಟಿಲ ಸಮಸ್ಯೆ. ಇದು ಬಹಳಷ್ಟು ಚರ್ಚೆಯಾಗಬೇಕಿದೆ. ಜಾತಿ ಗಣತಿ ವರದಿ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಸೂಚ್ಯವಾಗಿ‌ತಿಳಿಸಿದರು.


ಬೆಂಗಳೂರಿನ ಸಂಜಯನಗರದ ಸಚಿವ ಕೆ.ಹೆಚ್.ಮುನಿಯಪ್ಪ ಅವರ ನಿವಾಸದಲ್ಲಿ ಭೇಟಿ ಬಳಿಕ ಮಾತನಾಡಿದರು. ಜಾತಿಗಣತಿ ಕುರಿತು ಬಹಳಷ್ಟು ಚರ್ಚೆಯಾಗಬೇಕಿದೆ. ವರದಿ ಸ್ವೀಕಾರಕ್ಕೆ ಹತ್ತು ವರ್ಷ ತೆಗೆದುಕೊಂಡಿದೆ. ಹೀಗಾಗಿ ಇನ್ನೂ 1 ವರ್ಷವಾಗಬಹುದು. ಅಂಕಿ ಸಂಖ್ಯೆ ಜನರೇ ಬರೆಸಿದ್ದು ಅಲ್ವಾ. ಸಹಿ ಮಾಡಿದವರೆ ವಿರೋಧ ಮಾಡುತ್ತಿದ್ದಾರೆ. ಸಮಗ್ರ ಚರ್ಚೆಯಾಗಬೇಕು ಎಂದು ತಿಳಿಸಿದರು.

ಈಗ ಮೀಸಲಾತಿ ಹೆಚ್ಚು ಮಾಡುವುದು ಅಸಾಧ್ಯ. ಆಯೋಗದವರ ಶಿಫಾರಸು ಮಾಡಿದ್ದಾರೆ.‌ಸಾದರ ಜನರನ್ನು ಕಡಿಮೆ ತೋರಿಸಲಾಗಿದೆ. 64 ಸಾವಿರ ಅಷ್ಟೆ ತೋರಿಸಿದ್ದಾರೆ. ಮೂರು ಜಿಲ್ಲೆಗಳಲ್ಲಿ ಅವರಿದ್ದಾರೆ. ಹೀಗಾಗಿ ಅವರು ಧ್ವನಿ ಎತ್ತಿದ್ದಾರೆ. ಈಗ ಅಂಕಿ - ಅಂಶಗಳನ್ನು ಸರಿ ಮಾಡಬೇಕು.‌ಅಂಕಿ ಅಂಶಗಳನ್ನು ಸರಿ ಮಾಡಲು ಅವಕಾಶ ನೀಡಬೇಕು ಎಂದು ಸಚಿವರು ತಿಳಿಸಿದರು.

ಜಾತಿಗಣತಿ ವರದಿ ಶಿಫಾರಸು ಸರಿಯಾಗಿ ಜಾರಿ ಆಗಬೇಕು. ಸರಿಯಾಗಿ ನಾವು ಮಾಡದಿದ್ದರೆ ಕಷ್ಟವಾಗುತ್ತದೆ. ಹಿಂದಿನ ಸರ್ಕಾರದಂತೆ ನಮಗೆ ತೊಂದರೆಯಾಗುತ್ತದೆ. ಯಾವುದೇ ಸಮಾಜಕ್ಕೆ ನೋವಾಗಬಾರದು. ಇದಷ್ಟೇ ನಮ್ಮ ಉದ್ದೇಶ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಜಾತಿಗಣತಿಯಿಂದ ಯಾರಿಗೂ ತೊಂದರೆಯಾಗಲ್ಲ. ಲಿಂಗಾಯತ, ಒಕ್ಕಲಿಗ ಸೇರಿದಂತೆ ಯಾರಿಗೂ ತೊಂದರೆಯಾಗಲ್ಲ. ಜಾತಿಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಎಲ್ಲ ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ‌ಮಾಡುತ್ತೇವೆ ಎಂದು ತಿಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!