E-PAPER
24 Nov 2026, 01:56:40 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಿ.ವಿಮಲಾಕ್ಷಿಗೆ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಬಿ.ವಿಮಲಾಕ್ಷಿ ಅವರು ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಸಾವಿತ್ರಿಬಾಯಿಪುಲೆ ಜನ್ಮ ದಿನಾಚರಣೆಯಂದು ಗುರುಚೈತನ್ಯ ಉಪಾಧ್ಯಾಯ ಸಂಘವು “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿ ಪ್ರದಾನ ಮಾಡಿದೆ.

ಮುಖ್ಯ ಶಿಕ್ಷಕಿ ಬಿ.ವಿಮಲಾಕ್ಷಿ ಅವರು ತಮ್ಮ 24 ವರ್ಷಗಳ ಸುದೀರ್ಘ ಕಾಲದ ಶಿಕ್ಷಕ ವೃತ್ತಿಯಲ್ಲಿ ಶಾಲಾ ಮಕ್ಕಳ ಕಲಿಕಾ ಗುಣಮಟ್ಟ ಹಾಗೂ ಶಾಲಾ ಅಭಿವೃದ್ಧಿ ಕಡೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ದಾನಿಗಳ ಮೂಲಕ ಶಾಲೆಗೆ ಶೌಚಾಲಯ ನಿರ್ಮಾಣ,  ಗ್ರಂಥಾಲಯ, ನೋಟ್ ಪುಸ್ತಕಗಳು, ಡ್ರಮ್‍ಸೆಟ್, ಮಕ್ಕಳಿಗೆ ಯೋಗ ಸಮವಸ್ತ್ರ ಇತ್ಯಾದಿ ಸೇರಿದಂತೆ ಅನೇಕ ಶೈಕ್ಷಣಿಕ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಶ್ರಮವಹಿಸಿದ್ದಾರೆ. ರಾಜ್ಯಮಟ್ಟದ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿಯೂ ಮೆಚ್ಚುಗೆ ಗಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಏರ್ಪಡಿಸುವ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಎರಡು ಬಾರಿ ಪ್ರಥಮ ಸ್ಥಾನ,  ಮೂರು ಬಾರಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ದಶಕಗಳಿಂದಲೂ ಯೋಗಪಟುವಾಗಿ ಗುರುತಿಸಿಕೊಂಡು ಚಂದನವಾಹಿನಿಯಲ್ಲಿ ಯೋಗ ತರಬೇತಿ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

 ಮಕ್ಕಳಿಗೆ ಯೋಗ ಮಾಡಿಸುವುದರ ಮೂಲಕ ಪೋಷಕರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಗಮನ ಸೆಳೆದಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಇಂಗ್ಲಿಷ್ ಭಾಷಾ ತರಬೇತಿಗಳನ್ನು ಒಳಗೊಂಡಂತೆ ಅನೇಕ ತರಬೇತಿಗಳನ್ನು ನೀಡಿದ್ದಾರೆ.



ಮಹಿಳೆಯರ ಋತುಚಕ್ರದ ರಜೆಯನ್ನು ಕೊಡಿಸುವ ದೃಢಸಂಕಲ್ಪ ಮಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ, ಅತಿ ಹೆಚ್ಚಿನ ಮತಗಳಿಂದ ಗೆದ್ದು, ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಅನೇಕ ಬಾರಿ ಸಮಾಲೋಚಿಸಿ, ಮಹಿಳೆಯರ ಋತುಚಕ್ರ ರಜೆ ದೊರಕಿಸಿಕೊಡುವಲ್ಲಿ ಶಿಕ್ಷಕಿ ವಿಮಲಾಕ್ಷಿ ಅವರ ಸೇವೆ ಅಪಾರವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಇವರಿಗೆ ಅನೇಕ ಪ್ರಶಸ್ತಿಗಳು ಅರಸಿ ಬಂದಿವೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!