Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಎಸ್‌ಸಿಎಸ್‌‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮ ಪ್ರಗತಿ ಶೇ.97ರಷ್ಟು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲ್ಗೊಂಡು
, ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದರು.

 ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು:

ಕಳೆದ ವರ್ಷ ಎಸ್‌ಸಿಎಸ್‌‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38,793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು.

ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ಅನುದಾನದ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು.

ಈ ವರ್ಷ ರೂ. 42,017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ.

ದೇವದಾಸಿಯರೂ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ.

ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ.

ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1,086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು.
ಈ ವೇಳೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ
, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು