Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕೃಷಿ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾಚಗೊಂಡನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ
2025 ರಿಂದ 2030ರ ಅವಧಿಯ ಆಡಳಿತ ಮಂಡಳಿಗೆ ದಿ. 2.3.2025ರಂದು ನಡೆದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದ 12 ಸ್ಥಾನಗಳಲ್ಲಿ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಹತ್ತು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಸಾಮಾನ್ಯ ವರ್ಗದಿಂದ ಜಗನ್ನಾಥ್ ಎನ್, ಗೋಪಾಲರೆಡ್ಡಿ, ಜನಾರ್ದನ್. ಎಂ., ಮಂಜುನಾಥ್ ಎ., ಮುನಿನಾರಾಯಣ್, ಹಿಂದುಳಿದ ಎ. ವರ್ಗದಿಂದ ವೆಂಕಟೇಶ್, ಹಿಂದುಳಿದ ಬಿ. ವರ್ಗದಿಂದ ಕೃಷ್ಣಮೂರ್ತಿ,

ಮಹಿಳಾ ಮೀಸಲು ಸ್ಥಾನದಿಂದ ಭಾಗ್ಯಮ್ಮ, ಸುನಂದಮ್ಮ, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಮುನಿರಾಜು, ಅವಿರೋಧ ವಾಗಿ ಪರಿಶಿಷ್ಟ ಪಂಗಡದ ಸ್ಥಾನಕ್ಕೆ ರಾಮಾಂಜಿನಪ್ಪ, ಸಾಲಗಾರರಲ್ಲದ ಸ್ಥಾನಕ್ಕೆ ರಕ್ಷಿತ್ ಬಿ. ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಂ.ನಾಗಭೂಷಣ್ ವಿದ್ಯುಕ್ತವಾಗಿ ಚುನಾಯಿತರಾಗಿದ್ದಾರೆಂದು ಘೋಷಿಸಿದ್ದಾರೆ.

 ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಜಗನ್ನಾಥ್ ಮಾತನಾಡಿ ಮಾಚಗೊಂಡನಹಳ್ಳಿ ಕೃಷಿ ಸಹಕಾರ ಸಂಘಕ್ಕೆ ನೂತನ ಕಾಯಕಲ್ಪ ನೀಡಿ ರೈತರ ಶ್ರೇಯೋಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಂಘದ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತ ಪೂರ್ವ ಬಹುಮತ ನೀಡಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಹಲವಾರು ಮುಖಂಡರು ಅಭಿನಂದಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು