Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯದಲ್ಲಿ ಭೀಕರ ಬರ: ಶೇ. 50ರಷ್ಟು ಮಧ್ಯಂತರ ಆರ್ಥಿಕ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ತೀವ್ರಗೊಂಡಿರುವ ಭೀಕರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ತಕ್ಷಣವೇ ಶೇ. 50ರಷ್ಟು ಮಧ್ಯಂತರ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಅಸ್ತವ್ಯಸ್ತಗೊಂಡಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅವರು ಪ್ರಧಾನಿಯವರ ಗಮನಕ್ಕೆ ತಂದಿದ್ದಾರೆ.

Advertisement

ಹೆಚ್ಚಿದ ಬರಪೀಡಿತ ತಾಲೂಕುಗಳು: ರಾಜ್ಯದಲ್ಲಿ ಈಗಾಗಲೇ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ ಈಗ 177ಕ್ಕೆ ಏರಿಕೆಯಾಗಿದೆ.

 ಬೆಳೆ ನಷ್ಟ ಮತ್ತು ಆರ್ಥಿಕ ಸಂಕಷ್ಟ: ದೀರ್ಘಕಾಲದ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿದ್ದು, ನೀರಿನ ಲಭ್ಯತೆ, ಜಾನುವಾರುಗಳ ಸಂರಕ್ಷಣೆ ಮತ್ತು ಗ್ರಾಮೀಣ ಆರ್ಥಿಕತೆ ಮೇಲೆ ತೀವ್ರ ಪರಿಣಾಮ ಬೀರಿದೆ. ರಾಜ್ಯದಲ್ಲಿ ಬರೋಬ್ಬರಿ 40 ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ನಷ್ಟದ ಭೀತಿ ಎದುರಾಗಿದೆ.

ಕುಡಿಯುವ ನೀರಿನ ಆತಂಕ: ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದ್ದು, ಮುಂಬರುವ ದಿನಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಗಂಭೀರ ಆತಂಕವಿದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಮಧ್ಯಂತರ ನೆರವಿಗೆ ಆಗ್ರಹ: ಕೇಂದ್ರ ತಂಡದ ಕ್ಷೇತ್ರ ಪರಿಶೀಲನಾ ಪ್ರಕ್ರಿಯೆಗೆ ಕಾಲಾವಕಾಶ ಹಿಡಿಯುವುದರಿಂದ, ಸಂಕಷ್ಟದಲ್ಲಿರುವ ರೈತರಿಗೆ ಇನ್‌ಪುಟ್ ಸಬ್ಸಿಡಿ ವಿತರಿಸಲು ಮತ್ತು ಕುಡಿಯುವ ನೀರು ಪೂರೈಸಲು ಕೋರಿರುವ ಒಟ್ಟು ಅನುದಾನದ ಪೈಕಿ ಶೇ. 50ರಷ್ಟು ಮಧ್ಯಂತರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಜತೆಗೆ, ಎಸ್‌ಡಿಆರ್‌ಎಫ್ ನಿಧಿಯ ಎರಡನೇ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡುವಂತೆ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಯವರನ್ನು ಕೋರಿದ್ದಾರೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿರುವುದರಿಂದ ಕೇಂದ್ರ ಸರ್ಕಾರವು ತುರ್ತಾಗಿ ಸ್ಪಂದಿಸಿ ಆರ್ಥಿಕ ನೆರವು ನೀಡಬೇಕೆಂದು ರಾಜ್ಯ ಸರ್ಕಾರ ಬಲವಾಗಿ ಒತ್ತಾಯಿಸಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ