Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಕೋವಿಡ್ ನಲ್ಲಿ 6 ಕೋಟಿ ವೆಚ್ಚ ಮಾಡಿ ಆಕ್ಸಿಜನ್ ಪೂರೈಸಿದ್ದ ಶಾಮನೂರು ಶಿವಶಂಕರಪ್ಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಸೋಮವಾರ ಸಂತಾಪ ಸೂಚಿಸಿ, ಸಿದ್ದರಾಮಯ್ಯ ಅವರು ಮಾತನಾಡಿದರು.

ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು.
1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.


ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ  ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು, ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಸಿಎಂ ಸ್ಮರಿಸಿದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದೆ, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದೆ. ನನ್ನ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದೆ, ಅದಕ್ಕೂ ಸಾಕಷ್ಟು ಸಹಕಾರ ನೀಡಿದ್ದರು.

ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು.

ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು, ಭಗವಂತ ಅವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಸಿದ್ದರಾಮಯ್ಯ ಅವರು ಪ್ರಾರ್ಥಿಸಿದ್ದಾರೆ.

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ