Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಾಮನೂರು ಶಿವಶಂಕಪ್ಪ ಅವರ ಸಾವು ನಾಡಿಗೆ ತುಂಬಲಾರದ ನಷ್ಟ-ಸಿರಿಗೆರೆ ಶ್ರೀಗಳು

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರು 92ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ
ಸಂಜೆ ಕೊನೆಯುಸಿರೆಳೆದರು. ಅವರ ನಿಧನವು ನಾಡಿಗೆ ತುಂಬಲಾರದ ನಷ್ಟವಾಗಿದೆ.

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಎಐವಿಎಂ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ಬಾರಿ ಶಾಸಕ, 1 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು ಎಂದು ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ.

ಕಳೆದ ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ದಶಕಗಳ ರಾಜಕೀಯ ಅನುಭವ-
ಕರ್ನಾಟಕದ ರಾಜಕೀಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿ ಕೂಡ ಅಪಾರ ಕೊಡುಗೆ ನೀಡಿದ್ದಾರೆ.

ಸಮಾಜದ ಹಿರಿಯರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು , ಗುರು ಲಿಂಗ ಜಂಗಮರ ಆರಾಧಕರು ಬೀಗದೆ ಭಾಗುವ ಶಾಮನೂರು ಶಿವಶಂಕರಪ್ಪನವರು ಅಗಲುವಿಕೆ ನಿಜಕ್ಕೂ ದುಃಖಕರ

ಅವರ ತುಂಬು ಜೀವನದ ಭವ್ಯ ಯಶೋಗಾಥೆ ಸದಾ ಸ್ಪೂರ್ತಿ.
ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸಂಸ್ಥೆಯಾದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಅವರು ಸಮುದಾಯದ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಮಹತ್ತರ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕೀಯ ನಾಯಕನನ್ನು ಹಾಗೂ ಮಹತ್ವದ ಸಾಮಾಜಿಕ ಮುಖಂಡನನ್ನು ಕಳೆದುಕೊಂಡಂತಾಗಿದೆ.

ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಸ್ವಾಮೀಜಿಗಳು ಕೋರಿದ್ದಾರೆ.

 

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು