Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಅಧಿಕ ಉಷ್ಣಾಂಶ:ನಿಂಬೆ ಶರಬತ್, ಮಜ್ಜಿಗೆ ಮತ್ತಿತರ ತಂಪು ಪಾನೀಯ ಸೇವಿಸಿ- ಜಿಲ್ಲಾಧಿಕಾರಿ

ಚಂದ್ರವಳ್ಳಿ ನ್ಯೂಸ್, ತುಮಕೂರು:
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು
, ಇದರಿಂದ ಬಿಸಿ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಲಹೆ ನೀಡಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

        ಸಾರ್ವಜನಿಕರು ರೇಡಿಯೋ, ಟಿ.ವಿ., ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು.  ಬಾಯಾರಿಕೆಯಲ್ಲದಿದ್ದರೂ ಸಾಕ? ಮತ್ತು ಸಾಧ್ಯವಾದ? ಹೆಚ್ಚಾಗಿ ನೀರನ್ನು ಕುಡಿಯಬೇಕು.  ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು.  ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು.

        ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕು. 

        ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.  ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ಹಣ್ಣಿನ ಶರಬತ್, ಮಜ್ಜಿಗೆ ಇತ್ಯಾದಿಗಳನ್ನು ಬಳಸುವುದರಿಂದ ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.

        ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿರಿಸಿ ಅವುಗಳಿಗೆ ಕುಡಿಯಲು ಸಾಕ? ನೀರು ನೀಡಬೇಕು.  ಆದ? ಫ್ಯಾನುಗಳನ್ನು ಬಳಸಬೇಕು.  ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಕೆಲಸದ ಸಮಯವನ್ನು ಆದ? ತಂಪಾದ ಸಮಯದಲ್ಲಿ ಮಾಡಬೇಕು.

        ಮಾಲೀಕರು ಕೆಲಸದ ಸ್ಥಳದಲ್ಲಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಆನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

        ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿರುವವರು ಅದರಲ್ಲೂ ವಿಶೇ?ವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

         ಮಕ್ಕಳು ಹಾಗೂ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು.  ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ಹಾಗೂ ಮಧ್ಯಾಹ್ನ ೧೨ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು.

        ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡುಗೆ ಪ್ರದೇಶಗಳಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು.  ಇಂತಹ ಪಾನೀಯಗಳು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ.

        ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ