Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಶಿಲ್ಪಾ ಶ್ರೀನಿವಾಸ್ ಚಿತ್ರಕ್ಕೆ ಚಾಲನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಲ್ಪಾ ಶ್ರೀನಿವಾಸ್' ಚಿತ್ರಕ್ಕೆ ಶಿಲ್ಪಾ ಶ್ರೀನಿವಾಸ್ ಅವರೇ  ನಾಯಕ ಹೊಸಕೋಟೆಯ ಗಟ್ಟಿಗನಬ್ಬೆಯಲ್ಲಿ ಶಿಲ್ಪಾ ಶ್ರೀನಿವಾಸ್  ಚಿತ್ರಕ್ಕೆ ಚಾಲನೆ ನೀಡಿದರು.   

ನಮ್ಮ ಚಲನಚಿತ್ರೋದ್ಯಮ ಎಲ್ಲರಿಗೂ ಅವಕಾಶ ಕೊಡುತ್ತೆ. ನಿಜವಾಗಿ ಸಾಧನೆ ಮಾಡಬೇಕೆಂದು ಇಲ್ಲಿಗೆ ಬಂದವರು ಚಿತ್ರರಂಗವನ್ನು ತನ್ನ ತಾಯಿ ಎಂದು ಭಾವಿಸುತ್ತಾರೆ. ಕಲಾಮಾತೆ ಎಂದು ಆರಾಧಿಸುತ್ತಾರೆ.

ಇನ್ನು ಕೆಲವರು ಬರೀ ಶೋಕಿಗಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು ತನ್ನ ಹಿರಿಯರು, ಅಪ್ಪ, ಅಮ್ಮ ಕಷ್ಟಪಟ್ಟು ಕೂಡಿಟ್ಟ  ಸಂಪಾದನೆಯ  ಹಣವನ್ನು ವ್ಯಯಿಸುತ್ತಾರೆ. ಕಲಾಮಾತೆಯನ್ನು ಹಗುರವಾಗಿ ನೋಡುತ್ತಾರೆ. ಇಂಥವರಿಂದಾಗಿ ಚಿತ್ರರಂಗ ಅಧೋಗತಿಗೆ ಇಳಿಯುತ್ತಿದೆ.

ಇದನ್ನು ಮಟ್ಟ ಹಾಕಲು ಕಲಾಮಾತೆಯ ನಿಜವಾದ ಆರಾದಕನೊಬ್ಬ  ಏನೆಲ್ಲಾ ಮಾಡುತ್ತಾನೆ, ಅಂಥವರಿಗೆ ಹೇಗೆ ಬದ್ದಿ ಕಲೊಸುತ್ತಾನೆ ಎಂಬ ಕಥಾಹಂದರ ಒಳಗೊಂಡ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ. ಆ ಚಿತ್ರದ ಹೆಸರು 'ಶಿಲ್ಪಾ ಶ್ರೀನಿವಾಸ್.

ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೋಟೆಯ ಗಟ್ಟಿಗನಬ್ಬೆ ಯಲ್ಲಿ‌ ಚಾಲನೆ ದೊರೆಯಿತು.  ನಟ, ಸಂಕಲನಕಾರ ನಾಗೇಂದ್ರ ಅರಸ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.



   ಈ ಚಿತ್ರದಲ್ಲಿ ಹಿರಿಯ ನಿರ್ಮಾಪಕರೂ ವಿತರಕರೂ ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

  ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಮುಗಿಲ ಮಲ್ಲಿಗೆ ಸಿನಿಮಾದ ನಿರ್ದೇಶಕ ಆರ್ .ಕೆ. ಗಾಂಧಿ ಅವರು ಶಿಲ್ಪಾ ಶ್ರೀನಿವಾಸ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಲಿದ್ದಾರೆ.

ಅನಿರುದ್ಧ ಶಾಸ್ತ್ರಿಅವರ  ಸಂಗೀತ, ಪ್ರತಾಪ್ ಭಟ್ ಅವರ  ಸಾಹಿತ್ಯ, ಥ್ರಿಲ್ಲರ್ ಮಂಜು ಅವರ ಸಾಹಸ, ಪ್ರಮೋದ್ ಭಾರತೀಯ ಅವರ  ಛಾಯಾಗ್ರಹಣನಾಗೇಂದ್ರ ಅರಸ್ ಅವರ ಸಂಕಲನ, ಮೋಹನ್ ಕುಮಾರ್ ಅವರ ಪ್ರಸಾದನ, ಮಲ್ಲಿಕಾರ್ಜನ್ ಅವರ  ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಕಿಶೋರ್ ಕಾಸರಗೋಡು, ಸ್ವಾತಿ ಲಿಂಗರಾಜ್ಪ್ರಿಯಾಂಕ, ಮಾಸ್ಟರ್ ಮನ್ವಿತ್, ಮಾಸ್ಟರ್ ಅಬ್ಯಂತ್, ಶೋಭರಾಜ್, ನಾಗೇಂದ್ರ ಅರಸ್, ಕಿರಣ್ ಕುಮಾರ್ ಗಟ್ಟಿಗನಬ್ಬೆ, ಸಿ.ಟಿ. ಜಯರಾಮ್, ಹೋಸಕೋಟೆ ಶಿವಕುಮಾರ್, ಲೋಕೇಶ್, ಮಾಸ್ಟರ್ ಮನ್ವಿತ್, ಮಾಸ್ಟರ್ ಅಬ್ಯಂತ್ ಮೊದಲಾದವರು ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ಹೊಸಕೋಟೆ, ಚಿಕ್ಕಬಳ್ಳಾಪುರ ಅಲ್ಲದೆ ಬೆಂಗಳೂರಿನ  ಗಾಂಧಿನಗರದಲ್ಲಿ  ಒಟ್ಟು ಎರಡು ಹಂತಗಳಲ್ಲಿ ಶಿಲ್ಪಾ ಶ್ರೀನಿವಾಸ್ ಚಿತ್ರದ  ಚಿತ್ರೀಕರಣ ನಡೆಯಲಿದೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು