Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಶಾಕ್

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬಯಲು ಸೀಮೆಯ ಐದಾರು ಜಿಲ್ಲೆಗಳಿಗೆ ಕುಡಿಯುವ ನೀರು ಹರಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಆರಂಭವಾಗುವ ಈ ಯೋಜನೆಗೆ ಅಗತ್ಯವಿದ್ದ ಹೆಚ್ಚುವರಿ
423 ಎಕರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನಿರಾಕರಿಸಿದೆ. ಇದರಿಂದ, ಯೋಜನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಎದುರಾಗಿದೆ.


ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯ 432 ಎಕರೆ ಅರಣ್ಯ ಭೂಮಿಯನ್ನು ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಬಳಸುವ ನಿಟ್ಟಿನಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿಯ ಅಧೀನದಲ್ಲಿದ್ದ ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು.


ಜೂನ್ 26ರಂದು ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಹೆಚ್ಚುವರಿ ಅರಣ್ಯ ಭೂಮಿ ಬಳಕೆ ಪ್ರಸ್ತಾವನೆ ಕುರಿತು ಚರ್ಚೆಯಾಗಿತ್ತು. ಅಂತಿಮವಾಗಿ ಕೇಂದ್ರ ಅರಣ್ಯ ಇಲಾಖೆಯು ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡಿಲ್ಲ.

ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದಿಂದ ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿ ಬಳಸಲಾಗಿದೆ ಎಂದು ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿತ್ತು.


ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿ ಬಳಸಿ ಯೋಜನೆಯಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳು ಅರಣ್ಯ ನಿಯಮ ಉಲ್ಲಂಘಿಸಿರುವುದಾಗಿ ಸಮಿತಿಯು ವರದಿ ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸು ಮಾಡಿದೆ. ಜೊತೆಗೆ, ಲೋಪಗಳನ್ನು ಸರಿಪಡಿಸಿ ಸಮಜಾಯಿಷಿ ನೀಡಿದ ಬಳಿಕ ಮಾತ್ರ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಪರಿಗಣನೆಗೆ ಒಳಪಡಬಹುದೆಂದು ಸೂಚಿಸಿದೆ.

ಎತ್ತಿನಹೊಳೆ ಯೋಜನೆಗೆ 2016 ರಲ್ಲೇ 13.93 ಹೆಕ್ಟೇರ್ ಅರಣ್ಯ ಭೂಮಿ ಬಳಕೆಗೆ ಕೇಂದ್ರವು ಅನುಮೋದನೆ ನೀಡಿದ್ದು, 33 ಷರತ್ತುಗಳನ್ನು ವಿಧಿಸಿತ್ತು. ಆದರೆ ಬಹುತೇಕ ಷರತ್ತುಗಳನ್ನು ಈವರೆಗೆ ಪಾಲನೆ ಮಾಡಲಾಗಿಲ್ಲ. ಕಾಮಗಾರಿ ವೇಳೆ ಭೂಕುಸಿತ, ಮಣ್ಣಿನ ಕೊರೆತ, ಮನೆಗಳ ಹಾನಿ ಮುಂತಾದ ಪರಿಸರ ಭೀತಿಗಳು ಉಂಟಾಗಿದ್ದು, ಯಾವುದೇ ಪರಿಹಾರ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬ ತೀವ್ರ ಆಕ್ಷೇಪಗಳನ್ನು ಎನ್‌ಜಿಟಿ ಮೇಲ್ವಿಚಾರಣಾ ತಂಡವು 2019ರ ವರದಿಯಲ್ಲಿ ಉಲ್ಲೇಖಿಸಿತ್ತು.

ಎತ್ತಿನಹೊಳೆ ಯೋಜನೆ?
ಎತ್ತಿನಹೊಳೆ ನದಿಯಿಂದ ಸುಮಾರು 24 ಟಿಎಂಸಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಯೋಜನೆಯ ಮೊದಲ ಹಂತದ ಕಾಮಗಾರಿ 2024ರ ಸೆಪ್ಟೆಂಬರ್​​ನಲ್ಲಿ ಸಕಲೇಶಪುರದಲ್ಲಿ ಉದ್ಘಾಟನೆಯಾಗಿತ್ತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ