LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕಲ ಜೀವಿಗಳ ಮೇಲಣ ಶ್ರೀಮಾತೆಯವರ ಮಾತೃವಾತ್ಸಲ್ಯ ಅಗಾಧವಾದದ್ದು        

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಮಾತೆ ಶಾರದಾದೇವಿಯವರು ಸಕಲ ಜೀವಿಗಳ ಮೇಲೆ ಹರಿಸುತ್ತಿದ್ದ ಮಾತೃವಾತ್ಸಲ್ಯ ಅನಂತವಾದದ್ದು  ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಉಪಾಧ್ಯಕ್ಷರಾದ ಶ್ರೀಮತಿ ಎಂ ಗೀತಾ ನಾಗರಾಜ್ ತಿಳಿಸಿದರು‌.
ನಗರದ ತ್ಯಾಗರಾಜನಗರದ ಸದ್ಭಕ್ತರಾದ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಜನೆ ನಡೆಸಿಕೊಟ್ಟ ಅವರು "ಶ್ರೀಮಾತೆ ಶಾರದಾದೇವಿಯವರ ಅಗಾಧ ಮಾತೃವಾತ್ಸಲ್ಯ" ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು‌.


ಶಾರದಾಮಾತೆಯವರ ಸಮಗ್ರ ಜೀವನವನ್ನು ಅಧ್ಯಯನ ಮಾಡಿದಾಗ ಅವರ ಮಾತೃವಾತ್ಸಲ್ಯ ಕೇವಲ ಮನುಷ್ಯರ ಮೇಲಷ್ಟೇ ಹರಿಯದೆ ಜಗತ್ತಿನ ಸಕಲ ಪ್ರಾಣಿ-ಪಕ್ಷಿಗಳ ಮೇಲೆಯೂ ಹರಿಯುತ್ತಿತ್ತು ಎಂಬುದು ಗೊತ್ತಾಗುತ್ತದೆ. ಅವರ ಮನೆಯಲ್ಲಿದ್ದ ಬೆಕ್ಕು,ಕರು,ಅನಾಥ ಹುಡುಗ ಗೋವಿಂದನ ಮೇಲಣ ಅವರ ವಾತ್ಸಲ್ಯ ಅಪರಿಮಿತವಾದದ್ದು ಎಂದರು.


ಸತ್ಸಂಗದ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ,ಶ್ರೀಮತಿ ನೇತ್ರಾ ಮಂಜುನಾಥ, ಚಿನ್ನಮ್ಮ, ತಿಪ್ಪಮ್ಮ ಉಮಾಶಂಕರ್ ಅವರಿಂದ ವಿಶೇಷ ಭಜನೆಗಳು, ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಮಂಗಳಾರತಿ,ಪ್ರಸಾದ ವಿನಿಯೋಗ ನಡೆಯಿತು.
ಸತ್ಸಂಗ ಕಾರ್ಯಕ್ರಮದಲ್ಲಿ ಎಚ್ ಲಕ್ಷ್ಮೀದೇವಮ್ಮ , ಎಂ ಲಕ್ಷ್ಮೀದೇವಮ್ಮ ತಿಪ್ಪೇಸ್ವಾಮಿ,ಅರುಣ, ಪ್ರೇಮಾ, ಸರಸ್ವತಿ ರಾಜು, ಸರಸ್ವತಿ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ