ಚಂದ್ರವಳ್ಳಿ ನ್ಯೂಸ್, ಉಡುಪಿ:
ಕನ್ನಡ ಜಾನಪದ ಪರಿಷತ್ (ರಾಜ್ಯ ಘಟಕ, ಬೆಂಗಳೂರು) ಇದರ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ಆಯ್ಕೆಯಾಗಿದ್ದಾರೆ.
ಈ ಕುರಿತು ಕನ್ನಡ ಜಾನಪದ ಪರಿಷತ್ನ ರಾಜ್ಯ ಅಧ್ಯಕ್ಷರಾದ ಡಾ. ಎಸ್. ಬಾಲಾಜಿ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದ್ಯದಲ್ಲೇ ಉಡುಪಿ ಜಿಲ್ಲಾ ಘಟಕದ ಇತರೆ ಪದಾಧಿಕಾರಿಗಳ ಆಯ್ಕೆಯನ್ನು ಪೂರ್ಣಗೊಳಿಸಿ, ಅಧಿಕೃತವಾಗಿ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಡಾ. ಬಾಲಾಜಿ ಅವರು ಮಾಹಿತಿ ನೀಡಿದ್ದಾರೆ.




