Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸರ್ಕಾರದಿಂದ ಚಿತ್ರಸಂತೆಗೆ 50 ಲಕ್ಷ ರೂ.ಗಳ ಅನುದಾನ-ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಭಾನುವಾರ ನಡೆದ 23ನೇ ಚಿತ್ರಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿಗಳು ಮಾತನಾಡಿದರು.


ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ. 

ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ.  30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು.



ಸಾಲು ಮರದ ತಿಮ್ಮಕ್ಕನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಹಲವು ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು.

ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.


ನಾವು ಪರಿಸರ ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ. ಪರಿಸರ ಸಂರಕ್ಷಿಸಲು ಸರ್ಕಾರ  ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪರಿಸರವನ್ನು ಕಾಪಾಡೋದು ಅತ್ಯಂತ ಅವಶ್ಯಕತೆ ಹಾಗೂ ಅಗತ್ಯವಾಗಿದೆ ಎಂದು ತಿಳಿಸಿದರು.

ಚಿತ್ರಕಲಾ ಪರಿಷತ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಚಿತ್ರಸಂತೆಗೆ ಸರ್ಕಾರದ ವತಿಯಿಂದ 50 ಲಕ್ಷ ರೂ.ಗಳ  ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಸಚಿವರಾದ ಎಂ.ಸಿ.ಸುಧಾಕರ್
, ಪರಿಷತ್‌ನ ಪದಾಧಿಕಾರಿಗಳು, ನೂರಾರು ಕಲಾವಿದರು ಹಾಗೂ ಸಹಸ್ರಾರು ಕಲಾಪ್ರೇಮಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು